Menu

ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಬೆಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ‌ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಆವರಣದ ವಸತಿ ನಿಲಯದಲ್ಲಿ ನಡೆದಿದೆ. ಹೆಚ್. ಎನ್ ಪಾವನ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ಪಾವನ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಮಾಬಾಯಿ ಅಂಬೇಡ್ಕರ್ ಮಹಿಳಾ ವಸತಿ ನಿಲಯದಲ್ಲಿರುವ ತನ್ನ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿನಿ ಹೆಚ್ ಡಿ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆ: 18 ದೇಶ ಭಾಗಿ, 10 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ

ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ

ಬೆಂಗಳೂರು: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳ ಜಪ್ತಿ

ಬೆಂಗಳೂರು: ಭಾನುವಾರ ಬೆಂಗಳೂರು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದೇ ರಾಜ್ಯದಲ್ಲಿ ಸಂಚರಿಸುತ್ತಿದ್ದ ಫೆರಾರಿ, ಪೋರ್ಷೆ, ಬಿಎಂಡಬ್ಲೂ, ಬೆಂಜ್, ಔಡಿ, ಔಸ್ಟಿನ್, ರೇಂಜ್ ರೋವರ್ ಸೇರಿದಂತೆ 30 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಉಪ ಆಯುಕ್ತರಾದ ಸಿ. ಮಲ್ಲಿಕಾರ್ಜುನ್ ಅವರ

ಕುಂಭಮೇಳದಲ್ಲಿ ಸಾವಿರಾರು ಭಕ್ತರ ಸಾವು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆರೋಪ

ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸೋಮವಾರ ಆರಂಭವಾದ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಕುಂಭಮೇಳದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದು, ಅವರಿಗೆ

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ: ಬಿವೈ ವಿಜಯೇಂದ್ರ

ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ

ಎಥೆನಾಲ್ ಪ್ರಭಾವ: ಸಕ್ಕರೆ ಉತ್ಪಾದನೆ ಶೇ. 12ರಷ್ಟು ಕುಸಿತ

ನವದೆಹಲಿ: 2025ನೇ ಸಾಲಿನಲ್ಲಿ ಭಾರತದ ಸಕ್ಕರೆ ಉತ್ಪಾದನೆಯು ಗಮನಾರ್ಹ ಕುಸಿತವಾಗುವ ನಿರೀಕ್ಷೆಯಿದೆ ಎಂದು ಸೆಂಟ್ರಮ್ ವರದಿ ಹೇಳಿದೆ. ಹಿಂದಿನ ವರ್ಷದಲ್ಲಿ ಉತ್ಪಾದನೆಯಾಗಿದ್ದ 31.8 ಎಂಎಂಟಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಇದು 27 ಮಿಲಿಯನ್ ಮೆಟ್ರಿಕ್ ಟನ್ (ಎಂಎಂಟಿ) ಗಿಂತ ಕಡಿಮೆಯಾಗುವ ಮುನ್ಸೂಚನೆಗಳಿವೆ

ರಿಯಲ್ ಎಸ್ಟೇಟ್ ಗೆ ಎಚ್ಎಂಟಿ ಅರಣ್ಯ ಭೂಮಿ ಬಿಡಬೇಕೆ: ಎಚ್ ಡಿಕೆಗೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು, ಫೆ.3: ಕುದುರೇಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ

ಟ್ರಂಪ್ ತೆರಿಗೆ ಅಬ್ಬರಕ್ಕೆ ಪಾತಾಳಕ್ಕೆ ಕುಸಿದ ಭಾರತದ ರೂಪಾಯಿ!

ಹೊಸ ತೆರಿಗೆ ಪದ್ಧತಿ ಜಾರಿ ಘೋಷಿಸುವ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಮರ ಸಾರಿದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದ್ದು, ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದಿದೆ. ಸೋಮವಾರ ಷೇರು ಮಾರುಕಟ್ಟೆ ಆರಂಭಗೊಳ್ಳುತ್ತಿದ್ದಂತೆ ರೂಪಾಯಿ

ಮೈಕ್ರೊ ಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಕೆ ಶಿವಕುಮಾರ್

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್

ಲೋಕಸಭೆಯಲ್ಲಿ ಕುಂಭಮೇಳ ದುರಂತ ಪ್ರತಿಧ್ವನಿ: ಕೋಲಾಹಲ

ಕುಂಭಮೇಳದಲ್ಲಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 30 ಮಂದಿ ಮೃತಪಟ್ಟ ಘಟನೆ ಸೋಮವಾರ ಪ್ರತಿಪಕ್ಷಗಳು ಪ್ರಸ್ತಾಪಿಸಿದ್ದರಿಂದ ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಯಾಯಿತು. ಬಜೆಟ್ ಅಧಿವೇಶನ ಸೋಮವಾರ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ