Menu

ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ. ಬಿ.ಆರ್.ಅಂಬೇಡ್ಕರ್ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬಸವಣ್ಣ ಮತ್ತು ಅಂಬೇಡ್ಕರ್ ಅವರ ವಿಚಾರ ಮತ್ತು ಮೌಲ್ಯಗಳು ಒಂದೇ ಆಗಿವೆ. ವಿಚಾರಗಳಲ್ಲಿ ಸ್ವಲ್ಪ ವ್ಯತ್ಯಾಸಗಳಿದ್ದರೂ ಮೌಲ್ಯಗಳು ಮತ್ತು

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ತನಿಖೆಗೆ ಎಸ್ ಐಟಿ ರಚನೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಕುಟುಂಬದವರ ವಿರುದ್ಧ ಜಮೀನು ಕಬಳಿಕೆ ಆರೋಪದ ತನಿಖೆಗೆ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಮಾರಸ್ವಾಮಿ ಹಾಗೂ ಅವರ ಮನೆಯವರು ರಾಮನಗರ ಜಿಲ್ಲೆ ಬಿಡದಿ

ರೈಲ್ವೆಗೆ 2.60 ಲಕ್ಷ ಕೋಟಿ ರೂ. ಮೀಸಲು: ಕರ್ನಾಟಕಕ್ಕೆ ಬಂಪರ್!

ಈ ಬಾರಿಯ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ನೀಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಬಜೆಟ್

ಕರ್ನಾಟಕ ವಿರೋಧಿ ಬಜೆಟ್: ಸಿಎಂ ಸಿದ್ದರಾಮಯ್ಯ ಅಸಮಾಧಾನ

ದೂರದೃಷ್ಟಿ ರಹಿತ, ನಿರಾಶಾದಾಯಕ ಬಜೆಟ್ ಆಗಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಆಗಿದೆ. ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಲ್ಲಿಸಿದ ಬೇಡಿಕೆ ಪಟ್ಟಿಯಲ್ಲಿ ಒಂದೂ ಈಡೇರಿಸಿಲ್ಲ.

ಜನತಾ ಜನರ್ದನ ಬಜೆಟ್: ಪ್ರಧಾನಿ ಮೋದಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಬಜೆಟ್ ಜನತಾ ಜನಾರ್ದನ ಪರ ಬಜೆಟ್ ಆಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಶನಿವಾರ ಬಜೆಟ್ ಮಂಡನೆ ನಂತರ ಮಾಧ್ಯಮ ಪ್ರತಿಕ್ರಿಯೆ ಬಿಡುಗಡೆ ಮಾಡಿದ ಅವರು, ಈ ಬಾರಿಯ ಬಜೆಟ್ ದೇಶದ

ಕೇಂದ್ರ ಬಜೆಟ್ 2025: ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ

ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ. ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯ ವೃದ್ಧಿಸುವ ಮೂಲಕ ಅಭಿವೃದ್ಧಿ

ಬಜೆಟ್‌ನಲ್ಲಿ ಯಾವುದು ಅಗ್ಗ, ಯಾವುದು ತುಟ್ಟಿ

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2025-26 ನೇ ಕೇಂದ್ರ ಬಜೆಟ್‌ ಮಂಡಿಸಿದ್ದು, 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಾಣದ ಗುರಿ ಇದೆ ಎಂದು ಹೇಳಿದ್ದಾರೆ. ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ ಅವರು

ನಕಲಿ ಕುಂಭ ಮೇಳದ ಫೋಟೊ: ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರಕಾಶ್ ರಾಜ್ ದೂರು

ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೊಟೋ ಹರಿಬಿಟ್ಟ ಪ್ರಶಾಂತ್ ಸಂಬರ್ಗಿ ವಿರುದ್ಧ ನಟ ಪ್ರಕಾಶ್ ರಾಜ್ ಬೆಂಗಳೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಶಾಂತ್ ಸಂಬರಗಿ ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪೇಸ್‌ಬುಕ್ನಲ್ಲಿ ನನ್ನ

ಕರ್ನಾಟಕ ಪಬ್ಲಿಕ್ ಶಾಲೆಗೆ ಎಡಿಬಿ 2000 ಕೋಟಿ ರೂ. ಸಾಲ: ಮಧು ಬಂಗಾರಪ್ಪ

ಹೊಸದಾಗಿ ಆರಂಭಿಸಲಾಗುತ್ತಿರುವ 450 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ 2,000 ಕೋಟಿ ರೂ. ದೀರ್ಘಾವಧಿ ಸಾಲ ನೀಡಲು ಮುಂದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ

ಖಾಸಗಿ ಕಂಪನಿ ನಡೆಸುವ ಮೆಡಿಸಿನ್ ಪ್ರಯೋಗಕ್ಕೆ ಒಳಗಾಗಿದ್ದ ವ್ಯಕ್ತಿ ಸಾವು

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗಿ ಕಂಪನಿ ನಡೆಸುವ ಮೆಡಿಸಿನ್ ಪ್ರಯೋಗಕ್ಕೆ ಸ್ವಪ್ರೇರಿತವಾಗಿ ಒಳಗಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕಲಬುರಗಿಯ ನಾಗೇಶ್ (33) ಎಂದು ಗುರುತಿಸಲಾಗಿದೆ. ಕೃಷಿಕರಾಗಿದ್ದ ಅವರು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಮೆಡಿಸನ್ಸ್ ಕಂಪನಿಯೊಂದಕ್ಕೆ ಆ್ಯಪ್ ಮೂಲಕ ಮೆಡಿಸಿನ್ ಪ್ರಯೋಗಕ್ಕೆ