Menu

ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ. ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ಭಾವುಕರಾಗಿ ಮನವಿ ಮಾಡಿದರು. ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ನವದೆಹಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ

ಬೆಂಗಳೂರು-ಪುಣೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಸಂಸದ ಜೋಶಿ ಮನವಿ

ಬೆಂಗಳೂರು ಮತ್ತು ಪುಣೆ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ, ಬೆಂಗಳೂರು-ಪುಣೆ

ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ: ಅಪರಾಧಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಾದ ಬಸಪ್ಪ,

ಜೇನುನೊಣ ದಾಳಿಯಿಂದ ಮಕ್ಕಳ ರಕ್ಷಿಸಿ ಜೀವ ತೆತ್ತ ಅಂಗನವಾಡಿ ಕಾರ್ಯಕರ್ತೆ

ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಜೇನುನೊಣ ದಾಳಿಯಿಂದ ಮಕ್ಕಳ ಪ್ರಾಣ ರಕ್ಷಿಸಿ ತನ್ನ ಜೀವವನ್ನೇ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಅಂಗನವಾಡಿಯ ಕಾರ್ಯಕರ್ತೆಯ ಧೈರ್ಯ ಹಾಗೂ ಮಕ್ಕಳ ಮೇಲಿನ ಕಾಳಜಿ, ತ್ಯಾಗದಿಂದ 20 ಮಕ್ಕಳು ಪ್ರಾಣಾಪಾಯದಿಂದ

ಎಸ್‌ಐಆರ್‌ನಿಂದ ಪಶ್ಚಿಮಬಂಗಾಳಕ್ಕೆ ಅನ್ಯಾಯ: ಸುಪ್ರೀಂಕೋರ್ಟ್‌ನಲ್ಲಿ ದೀದಿ ಖುದ್ದು ವಾದ

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ರಾಜ್ಯದ ನೈಜ ಮತದಾರರಿಗೆ ಅನ್ಯಾಯವಾಗಿದೆ ಎಂದು ಸಲ್ಲಿಸಿದ್ದ ಅರ್ಜಿಯ ಪರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್‌ನಲ್ಲಿ ತಾವೇ ವಾದ ಮಂಡಿಸಿದ್ದಾರೆ. ಹೀಗೆ ಸುಪ್ರೀಂಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೊಸ

ಕರ್ನಾಟಕಕ್ಕೆ ಬಾಕಿ ಇರುವ ಹಣ ಬಿಡುಗಡೆಗೊಳಿಸಿ: ಕೇಂದ್ರಕ್ಕೆ ಸಂಸದ ಸಯ್ಯದ್ ನಾಸೀರ್ ಆಗ್ರಹ

15ನೇ ಹಣಕಾಸು ಆಯೋಗದಡಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದನ್ನು ಬಿಡುಡೆ ಮಾಡಬೇಕು ಎಂದು ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್‌ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್‌ ಹುಸೇನ್‌, 15ನೇ ಹಣಕಾಸು

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು, ಮನರೇಗಾ ಚರ್ಚೆ ನಡೆಯದಂತೆ ಡ್ರಾಮಾ: ಡಿಕೆ ಶಿವಕುಮಾರ್

ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಕಿಡಿಕಾರಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆಗೆ ಭಾರತ ಬದ್ಧ: ಕ್ಯಾರೋಲಿನ್ ಲೀವಿಟ್

ಭಾರತದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಬಳಿಕ ಸಾರಿಗೆ, ಇಂಧನ ಮತ್ತು ಕೃಷಿ ಕ್ಷೇತ್ರಗಳನ್ನು ಒಳಗೊಂಡಂತೆ ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆ ಮಾಡಲು ಹಾಗೂ ರಷ್ಯಾದಿಂದ ತೈಲ ಖರೀದಿಸದಿರಲು ಭಾರತ ಬದ್ಧವಾಗಿದೆ ಎಂದು ವೈಟ್‌ ಹೌಸ್‌ ಪ್ರೆಸ್‌ ಸೆಕ್ರಟರಿ ಕ್ಯಾರೋಲಿನ್ ಲೀವಿಟ್

ಜಾತಕ ತೋರಿಸಲು ಹೋದರೆ ರೇಪ್‌: ಮೂಡಿಗೆರೆಯಲ್ಲಿ ಅರ್ಚಕನ ಬಂಧನ

ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣರಾವ್