Menu

ಭೌತಿಕ, ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ಅರಿವು ಕೇಂದ್ರಗಳ ಸಬಲೀಕರಣ: ಪ್ರಿಯಾಂಕ್ ಖರ್ಗೆ

“ನಮ್ಮ ಗ್ರಾಮೀಣ ಸಮುದಾಯಗಳನ್ನು ಶಿಕ್ಷಣದ ಮೂಲಕ ಸಬಲೀಕರಣಗೊಳಿಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಬ್ರಿಟಿಷ್ ಕೌನ್ಸಿಲ್ನೊಂದಿಗಿನ ನಮ್ಮ ಪಾಲುದಾರಿಕೆಯೊಂದಿಗೆ, ಗ್ರಾಮೀಣ ಕರ್ನಾಟಕದ ಮಕ್ಕಳಿಗೆ ಎಲ್ಲಾ ಉತ್ತಮ ಗುಣಮಟ್ಟದ ಕಲಿಕೆಯ ಸಂಪನ್ಮೂಲಗಳಿಗೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಮೂಲಕ ಕಲಿಕೆಯನ್ನು ಪ್ರೇರೇಪಿಸುವ, ಕೌಶಲ್ಯಗಳನ್ನು ಬೆಳೆಸುವ ಮತ್ತು ದೊಡ್ಡ ಅವಕಾಶಗಳಿಗೆ ಬಾಗಿಲು ತೆರೆಯುವ ನಿಟ್ಟಿನಲ್ಲಿ ನಾವು ನಿರ್ಣಾಯಕ ಹೆಜ್ಜೆ ಇಡುತ್ತಿದ್ದೇವೆ. ಭೌತಿಕ ಮತ್ತು ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ನಮ್ಮ ಅರಿವು ಕೇಂದ್ರಗಳನ್ನು ಸಬಲೀಕರಣಗೊಳಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ

ಕೆಂಪೇಗೌಡ ಲೇಔಟ್ ನ 16 ಎಕರೆ ಒತ್ತುವರಿ ತೆರವುಗೊಳಿಸಿದ ಬಿಡಿಎ

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ಅತಿಕ್ರಮ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಜಾಗವನ್ನು ತೆರವುಗೊಳಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮರುವಶ ಮಾಡಿಕೊಂಡಿದೆ. ಜನವರಿ 16 ರಿಂದ 18 ರ ಮೂರು ದಿನಗಳ ಕಾರ್ಯಾಚರಣೆಯಲ್ಲಿ ಪ್ರಾಧಿಕಾರವು

ಯಾವ ಬಂಡಾಯ, ಭಿನ್ನಾಭಿಪ್ರಾಯ ಯಾವೂದು ಇಲ್ಲ: ಡಿಕೆ ಶಿವಕುಮಾರ್

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್!

ಯೂಟ್ಯೂಬರ್ ಧನರಾಜ್ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-11 ಮನೆಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಕನ್ನಡ ಮೂಲದ ಧನರಾಜ್ ಭಾನುವಾರ ನಡೆದ ಸೂಪರ್ ಸಂಡೇಯಲ್ಲಿ ಧನರಾಜ್ ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ. ಈ ಮೂಲಕ ಫಿನಾಲೆ ವಾರ ಪ್ರವೇಶಿಸುವಲ್ಲಿ

ಉದಯಕಾಲ ಸಿಇಓ ಡಿಬಿ ಬಸವರಾಜ್ ಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾನುವಾರದಂದು ಉದಯಕಾಲ ಪತ್ರಿಕೆಯ ಸಿಇಓ ಡಿ.ಬಿ. ಬಸವರಾಜ್ ಸರ್ ಇವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ

ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್​​ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್​ಫಾರಂಗೆ ಜಿಗಿದ

ಹೊನ್ನಾವರದಲ್ಲಿ  ಗರ್ಭ ಧರಿಸಿದ್ದ ಹಸು ಕಡಿದ ದುಷ್ಕರ್ಮಿಗಳು: ಸರ್ಕಾರದ ವಿರುದ್ಧ ಆರ್‌. ಅಶೋಕ್‌ ವಾಗ್ದಾಳಿ

ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರದ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು ಕರು ತೆಗೆದು ಬಿಸಾಡಿ ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ ಎಂದು

ನೆಲಮಂಗಲದಲ್ಲಿ ಕಾರು ಲಾರಿಯಡಿ ನಜ್ಜುಗುಜ್ಜಾದ್ರೂ ಪವಾಡವೆಂಬಂತೆ ಚಾಲಕ ಪಾರು

ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಸೋಮವಾರ ಬೆಳಗ್ಗೆ ನಡೆದ ಸರಣಿ ಅಪಘಾತದಲ್ಲಿ ಕಾರು ಚಾಲಕರೊಬ್ಬರು ಪವಾಡ ಸದೃಶವೆಂಬಂತೆ ಅಪಾಯದಿಂದ ಪಾರಾಗಿದ್ದಾರೆ. ಕಾರು ಲಾರಿ ಕೆಳಗೆ ಸಿಲುಕಿ ನಜ್ಜುಗುಜ್ಜಾದರೂ ತುಮಕೂರು ಜಿಲ್ಲೆಯ ಸೇಲ್ಸ್ ಟ್ಯಾಕ್ಸ್ ಕಚೇರಿಯ ಕಾರು ಚಾಲಕನಿಗೆ ಸಣ್ಣ ಪುಟ್ಟ

ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್: ಇಂದು ಶ್ರೀರಂಗಪಟ್ಟಣ ಬಂದ್‌

ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು (ಸೋಮವಾರ) ಶ್ರೀರಂಗಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸಿವೆ. ಕೆಲವು ತೆರೆದಿದ್ದ ಅಂಗಡಿಗಳನ್ನು