Featured
ಮನರೇಗಾ ಕಾಯ್ದೆ ಮರುಸ್ಥಾಪನೆಗೆ ಒತ್ತಾಯಿಸಿ ಸದನದಲ್ಲಿ ನಿರ್ಣಯ ಮಂಡನೆ
ಕೇಂದ್ರ ಸರ್ಕಾರದ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G)’ ಕಾಯ್ದೆಯನ್ನು ರದ್ದುಪಡಿಸಿ ಮತ್ತು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGA)’ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದಾರೆ. ಈ ಸದನವು ಭಾರತದ ಪ್ರಜಾಸತ್ತೆಯ ಭದ್ರಬುನಾದಿಯಾದ ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಅಧಿಕಾರ ವಿಕೇಂದ್ರೀಕರಣದ ತತ್ವಗಳಿಗೆ ತನ್ನ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಗ್ರಾಮೀಣ ಬಡವರ
ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧ: ಮಹಿಳೆಯ ಪತಿ ದೂರು ನೀಡಿದ್ದಕ್ಕೆ ಹಲ್ಲೆ, ಒಬ್ಬನ ಕೊಲೆ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಕಮಲಾಕರ ಭಟ್ ಗುರೂಜಿ ಶಿವಮೊಗ್ಗದ ಮಹಿಳೆ ಜೊತೆ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಮಹಿಳೆಯ ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಸೇರಿ
10 ವರ್ಷದ ಹಿಂದೆ ತಾಯಿಯೊಂದಿಗೆ ಎಸ್ಕೇಪ್ ಆಗಿದ್ದವನ ಕೊಲೆಗೈದ ಯುವಕ
ಹತ್ತು ವರ್ಷದ ಹಿಂದೆ ಅನೈತಿಕ ಸಂಬಂಧ ಬೆಳೆಸಿ ಮಹಿಳೆಯೊಂದಿಗೆ ಪರಾರಿಯಾಗಿದ್ದ ವ್ಯಕ್ತಿಯನ್ನು ಆ ಮಹಿಳೆಯ ಮಗ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.
“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ
ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 80-90ರ ದಶಕದ ಹಳ್ಳಿಯ ಕಥೆಯನ್ನು ಆಧರಿಸಿದ ಚಿತ್ರ ‘ಲ್ಯಾಂಡ್ಲಾರ್ಡ್’ ಆಗಿದ್ದು, ಕೋಡಿಹಳ್ಳಿ
ಸ್ನೇಹಿತನ ಪತ್ನಿ ಜತೆ ಸಲುಗೆ: ಗೆಳೆಯನಿಂದಲೇ ವ್ಯಕ್ತಿ ಕೊಲೆ
ಬಾದಾಮಿ ತಾಲೂಕಿನ ಖಾನಾಪುರ ಎಸ್‌ಕೆ ಗ್ರಾಮದಲ್ಲಿ ಸ್ನೇಹಿತನ ಪತ್ನಿ ಜತೆ ಸಲುಗೆ, ಫೋನ್ ಸಂಪರ್ಕದಲ್ಲಿದ್ದ ಕಾರಣಕ್ಕೆ ವ್ಯಕ್ತಿಯನ್ನು ಸ್ನೇಹಿತನೇ ಕೊಲೆ ಮಾಡಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಸ್ನೇಹಿತ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ಗೆಳೆಯನೇ ಕೊಲೆಗೈದಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳಿಗೆ ಭೂಸ್ವಾಧೀನ: ಡಿಕೆ ಶಿವಕುಮಾರ್
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು ಅವರು ಯಗಚಿ ಜಲಾಶಯದ ಎಡದಂಡೆ ನಾಲೆಗಳ
ಮಹಡಿಯಿಂದ ಬಿದ್ದು ಬಾಲಕ ಸಾವು: ಮದ್ಯ ಕುಡಿಸಿದ ಕಂಪೆನಿ ವಿರುದ್ಧ ದೂರು
ಬೆಂಗಳೂರಿನಲ್ಲಿ ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿ, 15 ವರ್ಷದ ಬಾಲಕ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಪ್ರಕರಣ ಸಂಬಂಧ ಪೋಷಕರು ಸ್ಥಳೀಯ ಕಂಪೆನಿ ಬಾಲಕನಿಗೆ ಮದ್ಯ ಕುಡಿಸಿರುವುದರಿಂದ ಈ ದುರಂತ ಸಂಭವಿಸಿರುವುದಾಗಿ ಆರೋಪಿಸಿದ್ದಾರೆ. ಸ್ಥಳೀಯ ಕಂಪೆನಿಯು ಬಾಲಕರಿಗೆ ಮದ್ಯ ನೀಡಿದೆ
ನಾನು ಸಿಎಂ ಪರ, ಅವರು ನನ್ನ ಪರ, ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ನನ್ನ ಕಷ್ಟ ಕಾಲದಲ್ಲಿ ಅವರೂ ಜತೆ ನಿಲ್ಲಲಿದ್ದಾರೆ: ಡಿಸಿಎಂ
ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ 100 % ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. One man with Courage makes a majority
ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ
ಅನುದಾನ ಮತ್ತು ತೆರಿಗೆ ಹಂಚಿಕೆ: ಕೇಂದ್ರ ಬಜೆಟ್ ಏಕಪಕ್ಷೀಯ ಧೋರಣೆ
ದೇಶದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಈಗ ಮಂಡಿಸಿರುವ ಬಜೆಟ್‌ಗೆ ತಜ್ಞರು ಪೂರ್ಣಾಂಕ ನೀಡಿ ಕೊಂಡಾಡಿರುವುದೇನೋ ಸರಿ. ಆದರೆ ಬಜೆಟ್‌ನಲ್ಲಿ ನೂರಕ್ಕೆ ನೂರರಷ್ಟು ದೇಶದ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸುವ ರೀತಿಯಲ್ಲಿ ಅನುದಾನ ಮತ್ತು ತೆರಿಗೆ ಹಂಚಿಕೆಯಾಗಿದೆಯೇ ಎಂಬ ಪ್ರಶ್ನೆಗೆ ನೇರ ಉತ್ತರವಂತೂ




