Menu

ಇಸ್ಕಾನ್‌ನಲ್ಲಿ ಇಂದು ರಾತ್ರಿ 11ರವರೆಗೂ ಶ್ರೀ ವೆಂಕಟೇಶ್ವರ ದರ್ಶನ

ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರು ನಗರ ಸೇರಿದಂತೆ ರಾಜ್ಯದ ದೇಗುಲಗಳಲ್ಲಿ ಭಕ್ತರು ನಸುಕಿನ ಜಾವದಿಂದಲೇ ಶ್ರೀ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ, ಮಲ್ಲೇಶ್ವರದ ವೈಯಾಲಿಕಾವಲ್ ಟಿಟಿಡಿ ದೇವಾಲಯ, ನೆಲಮಂಗಲದಲ್ಲಿರುವ ಶ್ರೀ ವೆಂಕಟೇಶ್ವರನ ದೇವಾಲಯ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವಿಶೇಷ ಪೂಜೆ, ಅಭಿಷೇಕ ಹಾಗೂ ಮಹಾಮಂಗಳಾರತಿಗಳು ನಡೆಯುತ್ತಿವೆ. ಇಸ್ಕಾನ್‌ ದೇವಸ್ಥಾನದಲ್ಲಿ ನಸುಕಿನ ಜಾವ 3:45ರಿಂದಲೇ ವಿಶೇಷ

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ: ಡಿಸಿಎಂ ಶಿವಕುಮಾರ್

ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ

ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್‌ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ

ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ರೆ ಬ್ಯಾಂಕ್‍ಗಳಿಗೆ ದಿನಕ್ಕೆ 100 ರೂ. ದಂಡ

ದೇಶದ ಬ್ಯಾಂಕ್‍ ಗಳು ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ದೂರುಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸ ಬೇಕು, ಇಲ್ಲವಾದರೆ ದಿನದ ಆಧಾರದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಒಂದು ತಿಂಗಳೊಳಗೆ ಗ್ರಾಹಕರ ದೂರು ಇತ್ಯರ್ಥವಾಗದೇ ಹೋದಲ್ಲಿ ದಿನಕ್ಕೆ 100 ರೂ.ನಂತೆ

ದರ್ಶನ್‌, ಪವಿತ್ರಾ ವಿಚಾರಣೆ ಫೆ.25ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್‍ ಸೇರಿ 17 ಆರೋಪಿಗಳು ವಿಚಾರಣೆಗೆ ಕೋರ್ಟ್‍ಗೆ ಹಾಜರಾಗಿದ್ದರು. ಆದರೆ ವಿಚಾರಣೆಯನ್ನು ಕೋರ್ಟ್‍ ಫೆ.25ಕ್ಕೆ ಮುಂದೂಡಿದೆ. ವಿಚಾರಣೆಗೆ ಆಗಮಿಸಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಮುಖ

ಮೆಂಟಲ್ ಹೆಲ್ತ್ ಮ್ಯಾಟರ್ಸ್ ಇದು: ಎಲ್‌ ಅಂಡ್‌ ಟಿ ಅಧ್ಯಕ್ಷರ ವಿರುದ್ಧ ಹರಿ ಹಾಯ್ದ ದೀಪಿಕಾ ಪಡುಕೋಣೆ

ಲಾರ್ಸೆನ್ ಮತ್ತು ಟೂಬ್ರೊ ಅಧ್ಯಕ್ಷ ಎಸ್‌ಎನ್ ಸುಬ್ರಹ್ಮಣ್ಯನ್ ನೌಕರರು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ನೀಡಿರುವ ಹೇಳಿಕೆಯನ್ನು ನಟಿ ದೀಪಿಕಾ ಪಡುಕೋಣೆ ಖಂಡಿಸಿದ್ದಾರೆ. ಈ ಹಿಂದೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿ ಇನ್ಫೋಸಿಸ್‌ ನಾರಾಯಣ ಮೂರ್ತಿ ಟೀಕೆಗೆ

ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು

ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ

ಮಂಗಳೂರಲ್ಲಿ ಅಕ್ರಮ ವಾಸವಿದ್ದ ಬಾಂಗ್ಲಾದೇಶಿ ಸೆರೆ

ಮಂಗಳೂರಿನ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25) ಬಂಧಿತ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ

ನಟ ಕಿಶೋರ್ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನೇಮಕ

ಬಹುಭಾಷಾ ನಟ ಕಿಶೋರ್ ಕುಮಾರ್. ಜಿ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ

ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡುವ ಪರಿಸ್ಥಿತಿ ಇಲ್ಲ: ಕೆಜೆ.ಜಾರ್ಜ್

ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ