Menu

2ನೇ ಬಾರಿ ನೋಟಿಸ್: ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!

ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನ ಸಿಐಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು. ಮೊದಲ ಬಾರಿ ನೋಟಿಸ್ ನೀಡಿದ್ದಾಗ ನಾನು ಮನೆಯಲ್ಲಿ ಇರಲಿಲ್ಲ. ಹಾಗಾಗಿ ವಿಚಾರಣೆಗೆ

ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ರಾಜ್ಯ ಸರ್ಕಾರದ ಮುಂದೆ ಶರಣಾಗಿದ್ದ ವಿವಿಧ ರಾಜ್ಯಗಳ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ

ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ

ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ: ಕೇಂದ್ರ ಸಮ್ಮತಿ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್

ಬಿಜೆಪಿಯೇತರ ಸರ್ಕಾರಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿಕೆ ಶಿವಕುಮಾರ್

ಕುಂಭಕೋಣಂ: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಲ್ಲಿನ ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ

ದುಬಾರಿ ಆಗಲಿದೆ ಸಕ್ಕರೆ ಬೆಲೆ!

ನವದೆಹಲಿ: ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಕ್ಕರೆ ಉತ್ಪಾದನೆಯು ಶೇ.16 ರಷ್ಟು ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಬೆಲೆ ತುಟ್ಟಿಯಾಗುವುದು ಖಚಿತವಾಗಿದೆ. ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಚಿತ ಚಿಕಿತ್ಸೆ ಘೋಷಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!

ದೇಶಾದ್ಯಂತ ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮಾರ್ಚ್ ನಿಂದ ಆರಂಭಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಸ್ತುತ ಅಪಘಾತಕ್ಕೊಳಗಾದ ವ್ಯಕ್ತಿಗೆ ಗರಿಷ್ಠ 1.5

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.15ಕ್ಕೆ ಸಚಿವ ಸಂಪುಟ ಸಭೆ

ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್‌. ಅಶೋಕ್‌

ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ. ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು