Menu

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ

ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ. ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

ರಾಜ್ಯದಲ್ಲಿ ಮೂರು ದಿನ ಕಾಡಲಿದೆ ಅತಿ ಶೀತಗಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತೀವ್ರವಾದ ಶೀತಗಾಳಿ ವ್ಯಾಪಿಸಲಿದ್ದು, ಉಷ್ಣಾಂಶ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್,

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ

ಪಿಎಫ್​ಐ ಉಗ್ರರಿಗೆ ದುಬೈ ಹಣ ಹಂಚುತ್ತಿದ್ದಾತ ಎನ್‌ಐಎ ಬಲೆಗೆ

ದುಬೈನಿಂದ ಬರುತ್ತಿದ್ದ ಹಣವನ್ನು ನಿಷೇಧಿತ ಪಿಎಫ್​ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ಕರ್ನಾಟಕ ಹಾಗೂ ಕೇರಳದ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಬಂಧಿತ.

ಆರೋಪ ಮಾಡಿದರೆ ಸಾಲದು, ಸಾಬೀತು ಮಾಡಿ: ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ  ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯ ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ: ಕುಮಾರಸ್ವಾಮಿ ಕಿಡಿ

ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60

ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ

ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು

ಕುಡಿದ ಮತ್ತಲ್ಲಿ ತಾಯಿಯ ಕೊಂದು ಸುಸೈಡ್‌ ಮಾಡಿಕೊಂಡ ಮಗ

ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡವ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಈ

ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ

ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್‌ ಟಿಕೆಟ್‌ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ

ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್‌ ವಿರುದ್ಧ  ಪರವೇಶ್ ಕಣಕ್ಕೆ

ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ