Thursday, January 15, 2026
Menu

ಗ್ಯಾಸ್ ಗೀಸರ್ ಸೋರಿಕೆ: ಬೆಂಗಳೂರಿನಲ್ಲಿ ತಾಯಿ ಮಗು ಸಾವು

ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗು ಮೃತಪಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಇಬ್ಬರೂ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ದೊಡ್ಡ ಮಗಳನ್ನು ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಹೋಗುತ್ತಿದ್ದ ಚಾಂದಿನಿ ಸೋಮವಾರ ಹೋಗಿಲ್ಲ, ಪತಿ ಕಿರಣ್‌ಗೆ ಕಾಲ್‌ ಮಾಡಿದ್ದರು.

ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್ 

“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ

ಜನವರಿಯಿಂದ ಇಂದಿರಾ ಕಿಟ್ ವಿತರಣೆ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಳಗಾವಿ:ಬಿಪಿಎಲ್ ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯ ಬದಲಿಗೆ ಬರುವ ಜನವರಿಯಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಮೇಲ್ಮೈಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ

ಶೀಘ್ರದಲ್ಲೇ ನಮ್ಮ ಮೆಟ್ರೋಗೆ 96 ರೈಲುಗಳ ಸೇರ್ಪಡೆ!

ಬೆಂಗಳೂರು: ಶೀಘ್ರದಲ್ಲೇ ಹೊಸದಾಗಿ 96 ರೈಲುಗಳನ್ನು ಸೇರ್ಪಡೆಗೊಳಿಸುವ ಮೂಲಕ ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಯೆಲ್ಲೋ ಲೈನ್​ ಆರಂಭದ ಬೆನ್ನಲ್ಲೇ ಬರೋಬ್ಬರಿ 96 ಹೊಸ ರೈಲುಗಳ ನಮ್ಮ ಮೆಟ್ರೋಗೆ ಬರುತ್ತಿದ್ದು, ಅವುಗಳು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ 4

ವಂದೇ ಮಾತರಂ ಸರಿಯಾಗಿ ಅರ್ಥ ಮಾಡಿಕೊಳ್ಳಿ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ವಂದೇ ಮಾತರಂ ಗೀತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆಗೆ ಲೋಕಸಭೆ ಅಧಿವೇಶನದಲ್ಲಿ ಸೋಮವಾರ ಅವಕಾಶ

ಜಿನ್ನಾ ಕಾರಣಕ್ಕೆ ವಂದೇ ಮಾತರಂ ಗೀತೆಗೆ ನೆಹರು ಕತ್ತರಿ: ಪ್ರಧಾನಿ ಮೋದಿ ಕಿಡಿ

ನವದೆಹಲಿ: ಮುಸ್ಲಿಮ್ ಲೀಗ್ ನಾಯಕ ಮೊಹಮದ್ ಅಲಿ ಜಿನ್ನಾ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ವಂದೇ ಮಾತರಂ ಹಾಡನ್ನು ಕಾಂಗ್ರೆಸ್ ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ

ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಮಿಕ ರೋಗ ಕಾರಣ: ಸಚಿವ ಈಶ್ವರ ಬಿ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್

ಯುವನಿಧಿ ಯೋಜನೆ: 2.84 ಲಕ್ಷ ಮಂದಿಗೆ 757 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ!

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು

ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್  ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್  ಅಧಿವೇಶನದಲ್ಲಿ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ  157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ