Featured
ಮಡಿಕೇರಿ ವಸತಿ ಶಾಲೆಗೆ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು
ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಬೆಳಗಿನ ನಾಲ್ಕು-ಐದು ಗಂಟೆ ವೇಳೆಗೆ ಈ ದುರಂತ ಸಂಭವಿಸಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಉಳಿದ ಮಕ್ಕಳು ಸಣ್ಣಪುಟ್ಟ
10 ಕೆಜಿ ಅಕ್ಕಿ ಬದಲು 5 ಕೆಜಿ ಜೊತೆ ಇಂದಿರಾ ಆಹಾರ ಕಿಟ್ : ಸಂಪುಟ ತೀರ್ಮಾನ
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿಯಲ್ಲಿ 5 ಕೆಜಿ ಅಕ್ಕಿ ಕಡಿತ ಮಾಡಿ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯ
ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ: ಸಂಪುಟ ಅಸ್ತು
ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನೀತಿಯು 2025ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಮತ್ತು ಕೈಗಾರಿಕಾ ವಲಯದಲ್ಲಿ
ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್
“ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್
ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಆರೋಪಿಗಳು ಅರೆಸ್ಟ್
ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಚ್ಚಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ನೇಹಿತರೊಂದಿಗೆ ಮಂಗಳವಾರ ರಾತ್ರಿ ಊಟ ಮುಗಿಸಿ ವೆಂಕಟೇಶ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿ ಅಪಘಾತದ ನೆಪಮಾಡಿ ಕೊಲೆ ಮಾಡಿದ್ದ ಐವರಲ್ಲಿ
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇಲ್ಲ: ಸಚಿವ ಶಿವರಾಜ ತಂಗಡಗಿ
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.
ಜನರ ಚಪ್ಪಾಳೆಗಾಗಿ ಸಿಎಂ ಸಿದ್ದರಾಮಯ್ಯ, ಉಗ್ರಪ್ಪ ಮಾತನಾಡುವುದು ಸರಿಯಲ್ಲ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ
ವಾಲ್ಮೀಕಿ ಸಮುದಾಯದವರ ಸಮಾವೇಶ ಕಾರ್ಯಕ್ರಮದಲ್ಲಿ ಕುರುಬ ಸಮುದಾಯದವರ ಹೆಸರು ಪ್ರಸ್ತಾಪಿಸಿ ಮಾಜಿ ಸಂಸದ ಉಗ್ರಪ್ಪನವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು ಸರಿಯಲ್ಲ, ಒಂದು ತರ ನೋಡಿದರೆ ರಾಜಕೀಯ ಚಟಕ್ಕೆ ಹಾಗೂ ಜನರ ಚಪ್ಪಾಳೆಗಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ
6 ತಿಂಗಳ ಹಿಂದೆ ಮದುವೆ: ಗುಡಿಬಂಡೆಯಲ್ಲಿ ಪತಿಯ ಕಿರುಕುಳವೆಂದು ಪತ್ನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ 6 ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆ ಪತಿಯ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಎಸ್. ಜಯಶ್ರೀ (25) ಆತ್ಮಹತ್ಯೆ ಮಾಡಿಕೊಂಡವರು, ಆರು ತಿಂಗಳ ಹಿಂದೆ ಚಂದ್ರಶೇಖರ್ ಎಂಬವರ ಜೊತೆ ಮದುವೆಯಾಗಿತ್ತು. ಶಿಡ್ಲಘಟ್ಟ
ಮೂಡಲಗಿಯಲ್ಲಿ ಐದು ತಿಂಗಳ ಹಿಂದೆ ಮದುವೆ: ಪತ್ನಿಯ ಕೊಲೆಗೈದು ಪತಿ ಪರಾರಿ
ಐದು ತಿಂಗಳ ಹಿಂದೆ ಮದುವೆಯಾಗಿರುವ ವ್ಯಕ್ತಿ ಪತ್ನಿಯನ್ನು ಕೊಲೆ ಮಾಡಿ ಶವವನ್ನು ಬೆಡ್ ಕೆಳಗೆ ಅಡಗಿಸಿಟ್ಟು ಪರಾರಿಯಾಗಿರುವ ದಾರುಣ ಘಟನೆಯೊಂದು ಬೆಳಗಾವಿಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಸಾಕ್ಷಿ ಕಂಬಾರ (20) ಕೊಲೆಯಾದವರು, ಪತಿ ಆಕಾಶ್ ಕಂಬಾರ ಕೊಲೆ
ಮೈಸೂರು ದಸರಾದಲ್ಲಿ ಬಲೂನ್ ಮಾರಾಟಕ್ಕೆ ಬಂದಿದ್ದ ಬಾಲಕಿಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆ ಶಂಕೆ
ಮೈಸೂರಿನಲ್ಲಿ ನಾಡ ಹಬ್ಬ ದಸರಾದಲ್ಲಿ ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಸಮುದಾಯದ ಬಡ ಕುಟುಂಬವೊಂದರ ಹತ್ತು ವರ್ಷದ ಬಾಲಕಿಯ ಶವ ನಜರ್‌ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ದಸರಾ ಹಬ್ಬದ ಸಂಭ್ರಮದ ನಡುವೆ ಈ ಪೈಶಾಚಿಕ




