Menu

25 ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ

ಶಾಸಕರಿಗೆ ಮಾತ್ರ ಅನ್ವಯವಾಗುವಂತೆ 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಎರಡು ವರ್ಷಗಳ ಅವಧಿಗೆ 2024ರ ಜ.26ರಂದು ನಿಗಮ ಮಂಡಳಿ ಅಧ್ಯಕ್ಷರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಜನವರಿ 26ಕ್ಕೆ ಇವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಅಧಿಕಾರಾವಧಿ ವಿಸ್ತರಣೆ ಮಾಡಿರುವ ರಾಜ್ಯ ಸರ್ಕಾರ ಮುಂದಿನ ಆದೇಶದವರೆಗೂ 25 ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನಮಾನ

ಮೈಸೂರಿನ ಮೃಗಾಲಯದ ಹಿರಿಯಜ್ಜ ಯುವರಾಜ ಇನ್ನಿಲ್ಲ

ಮೈಸೂರು: ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ” ಇಂದು ಸಾವನ್ನಪ್ಪಿದೆ. ಈ ಕುರಿತು ಮೈಸೂರು ಮೃಗಾಲಯವು ಮಾಹಿತಿ ನೀಡಿದ್ದು, ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ ವೃದ್ದಾಪ್ಯದ ಕಾರಣ

ಮುಡಾ ಹಗರಣ: ಸಿದ್ದರಾಮಯ್ಯ, ಪತ್ನಿ ಪಾರ್ವತಿ ನಿರಾಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರ ವಿರುದ್ಧದ ಮುಡಾ ಸೈಟು ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ

ಧಾರವಾಡ ಹಾಸ್ಟೆಲ್‌ನಲ್ಲಿ ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ

ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (DIMHANS)ಯ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನಲ್ಲಿ  ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ (24) ಆತ್ಮಹತ್ಯೆ ಮಾಡಿಕೊಂಡವರು. ಡಾ. ಪ್ರಜ್ಞಾ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರ ವಿಭಾಗದ ಪ್ರಥಮ

ಬೆಂಗಳೂರು ಬಿಲ್ಡರ್‌ ನಿವಾಸದಿಂದ ಮನೆಗೆಲಸ ದಂಪತಿ ದೋಚಿದ್ದು 18 ಕೋಟಿ ರೂ.ಗಳ ಚಿನ್ನಾಭರಣ

ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಎಂಬವರ ಮನೆಯಿಂದ 18 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ದಿನೇಶ್ ಮತ್ತು ಕಮಲಾ ಎಂಬ ದಂಪತಿಯನ್ನು ಕೆಲವು ದಿನಗಳ ಹಿಂದೆ ಮನೆ ಕೆಲಸಕ್ಕೆಂದು ನೇಮಿಸಿಕೊಳ್ಳಲಾಗಿತ್ತು. ಆದಂಪತಿ ಈ

ವಾಟ್ಸಾಪ್‌ಗೂ ಇನ್ಮುಂದೆ ಸಬ್‌ಸ್ಕ್ರಿಪ್ಷನ್?

ವಾಟ್ಸಾಪ್ ಬಳಕೆದಾರರಿಗೆ ಇಷ್ಟು ದಿನ ಸಂಪೂರ್ಣವಾಗಿ ಉಚಿತವಾಗಿ ಸಿಗುತ್ತಿದ್ದ ಮೆಸೇಜಿಂಗ್ ಸೇವೆಗೆ ಇನ್ನು ಮುಂದೆ ಹಣ ಪಾವತಿಸಬೇಕಾದ ದಿನಗಳು ದೂರವಿಲ್ಲ. ಡೇಟಾ ರೀಚಾರ್ಜ್‌ ಜೊತೆಗೆ ಮಾಸಿಕ ಸಬ್‌ಸ್ಕ್ರಿಪ್ಷನ್‌  ಬಗ್ಗಯೂ ಯೋಚಿಸಬೇಕಾಗುತ್ತದೆ. ಮಾರ್ಕ್ ಜುಕರ್‌ಬರ್ಗ್ ನೇತೃತ್ವದ ಮೆಟಾ ವಾಟ್ಸಾಪ್ ಮೂಲಕ ಆದಾಯ ಗಳಿಸಲು

ನಾಳೆ ಸಾರಿಗೆ ನೌಕರರ ಪ್ರತಿಭಟನೆ: ಬೇಡಿಕೆ ಈಡೇರದಿದ್ದರೆ ರಾಜೀನಾಮೆ ಎಚ್ಚರಿಕೆ

ಕೆಎಸ್‌ಆರ್‌ಟಿಸಿ ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಜ.29)ರಂದು ಪ್ರತಿಭಟನೆ ನಡೆಸಲಿದ್ದು, ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ

ಪ್ರಿವೆಂಟಿವ್‌ ಹೆಲ್ತ್‌ ಕೇರ್‌ ಯೋಜನೆಯಡಿ ಅಕ್ರಮಕ್ಕೆ ಅವಕಾಶವಿಲ್ಲ: ಸಂತೋಷ್‌ ಲಾಡ್‌

ನೋಂದಾಯಿತ ಕಟ್ಟಡ ಕಾರ್ಮಿಕರ ಆರೋಗ್ಯ ಕಾಪಾಡಲು ನಡೆಸುವ ಪ್ರಿವೆಂಟಿವ್‌ ಹೆಲ್ತ್‌ ಕೇರ್‌ ಯೋಜನೆಯಡಿ ಪರೀಕ್ಷೆಗಳನ್ನು ನಿಯಮಾನುಸಾರ ನಡೆಸಲಾಗುತ್ತದೆ. ಅಕ್ರಮ ನಡೆದಿರುವ ದೂರುಗಳಿದ್ದರೆ ತನಿಖೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌  ಭರವಸೆ ನೀಡಿದರು. ವಿಧಾನಸಭೆಯ ಕಲಾಪದಲ್ಲಿ ಶಿರಹಟ್ಟಿ ಮತಕ್ಷೇತ್ರದ

ಐಟಿ ಕಂಪನಿಯ 87 ಕೋಟಿ ರೂ. ಮೌಲ್ಯದ ಡೇಟಾ ಕದ್ದ ಉದ್ಯೋಗಿ

ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿ 87 ಕೋಟಿ ರೂ. ಮೌಲ್ಯದ ಸಾಫ್ಟ್‌ವೇರ್ ಸೋರ್ಸ್ ಕೋಡ್ ಕದ್ದಿರುವ ಆರೋಪ ಕೇಳಿ ಬಂದಿದ್ದು, ಕಂಪೆನಿಯಿಂದ ವಜಾಗೊಳಿಸಲಾಗಿದೆ. ಕಂಪನಿಯ ಆಂತರಿಕ ತನಿಖೆಯ ನಂತರ ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಡೇಟಾ ಕಳವಿನಿಂದ ಕಂಪನಿಗೆ ದೊಡ್ಡ

ಮಂಗನಕಾಯಿಲೆಗೆ ತೀರ್ಥಹಳ್ಳಿ ಯುವಕ ಬಲಿ

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಮಂಗನಕಾಯಿಲೆ (ಕೆಎಫ್ ಡಿ)ಯಿಂದ ಮೃತಪಟ್ಟಿದ್ದಾರೆ.   ಸೋಂಕಿನಿಂದಾಗಿ  ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಕಳೆದ ಭಾನುವಾರದಿಂದ  ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದರೂ ಫಲಕಾರಿಯಾಗದೆ ಅಸು ನೀಗಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ