Menu

ಮೈಸೂರಿನಲ್ಲಿ ಹಾಡುಹಾಗಲೇ ಆಟೋ ಚಾಲಕನ ಬರ್ಬರ ಹತ್ಯೆ

ಹಾಡುಹಾಗಲೇ ಅರಮನೆ ಸಮೀಪ ಪ್ರವಾಸಿಗರ ಎದುರಿನಲ್ಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಗುಂಪೊಂದು ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ಮಂಗಳವಾರ ನಡೆದಿದೆ. ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ಆಟೋ ಓಡಿಸುತ್ತಿದ್ದ ಮೈಸೂರಿನ ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿಯ ನಿವಾಸಿ ವೆಂಕಟೇಶ್ ಅಲಿಯಾಸ್ ಗಿಲ್ಕಿ ವೆಂಕಟೇಶ್ (38 ಅವರನ್ನು ಕೊಲೆ ಮಾಡಲಾಗಿದೆ. ಆಟೋ ಚಾಲನೆ ಮಾಡುತ್ತಿದ್ದ ಅವರು, ತಮ್ಮ ಮಾರುತಿ ಸ್ವಿಫ್ಟ್ (ಕೆಎ ೦೫, ಎನ್.ಬಿ. ೯೫೭೪) ಕಾರಿನಲ್ಲಿ ಅರಮನೆ

ಅಕ್ಟೋಬರ್ 18 ರವರೆಗೆ ಮನೆ ಮನೆ ಸಮೀಕ್ಷೆ: ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ

ಮನೆ ಮನೆ ಸಮೀಕ್ಷೆ ಅಕ್ಟೋಬರ್ 18 ರ ವರೆಗೆ ನಡೆಯಲಿದ್ದು, ಅಲ್ಲಿವರೆಗೆ  ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ. PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ, ವಿಶೇಷ ಬೋಧನಾ ತರಗತಿಗಳ ಮೂಲಕ ಶಿಕ್ಷಕರು ಪಠ್ಯ ಪೂರ್ಣಗೊಳಿಸಲಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕುರುಬರನ್ನೂ ST ಗೆ ಸೇರಿಸಿದರೆ ST ಮೀಸಲು ಪ್ರಮಾಣ ಹೆಚ್ಚಾಗಬೇಕು: ಮುಖ್ಯಮಂತ್ರಿ

ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ

ಭಾರತ- ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಟ್ರಂಪ್‌ ಪುಂಗಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಯುದ್ಧ ನಿಲ್ಲಿಸಿದ್ದು ನಾನೇ, ಸುಂಕಾಸ್ತ್ರ ಹಾಗೂ ವ್ಯಾಪಾರ ಒತ್ತಡ ಪ್ರಮುಖ ಪಾತ್ರ ವಹಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ಟ್ರಂಪ್ ತಾನು ವಿಧಿಸಿರುವ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸುಂಕ ನೀತಿಗಳು

ರಿಕವರಿ ಚಿನ್ನ ವಾರಸುದಾರರಿಗೆ ನೀಡದ ಪೊಲೀಸ್‌ ವಿರುದ್ಧ ದೂರು

ಕಳ್ಳತನ ಪ್ರಕರಣಗಳಲ್ಲಿ ಚಿನ್ನ ರಿಕವರಿ ಮಾಡಿರುವ ಪೊಲೀಸರು ಆ ಚಿನ್ನವನ್ನು ವಾರಸುದಾರರಿಗೆ ಹಿಂತಿರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ವಿರುದ್ಧ ಈ ಸಂಬಂಧ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ

ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ:  ಸಿಎಂ ಸಿದ್ದರಾಮಯ್ಯ

ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ  ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ,

ಬೆಳಗಾವಿಯಲ್ಲಿ ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ಯತ್ನ

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ರಾಮನಗರದಲ್ಲಿ ಮಹಿಳೆಯೊಬ್ಬರು ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ವಿಫಲ ಯತ್ನ ನಡೆಸಿದ್ದಾರೆ. ವೈಶಾಲಿ ಪಾಟೀಲ್ (48) ಕಾದ ಅಡುಗೆ ಎಣ್ಣೆಯನ್ನು ಪತಿ ಸುಭಾಷ ಪಾಟೀಲ್ (55)ಗೆ ಸುರಿದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕ ನಡೆಯಲಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ನಟಿಗೆ ಲೈಂಗಿಕ ಕಿರುಕುಳ ಆರೋಪ: ನಿರ್ಮಾಪಕ ಹೇಮಂತ್‌ ಕುಮಾರ್‌ ಅರೆಸ್ಟ್‌

ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿರ್ಮಾಪಕ ಹೇಮಂತ್‌ ಕುಮಾರ್‌ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ನಿರ್ಮಾಪಕ ಹೇಮಂತ್‌ ಕುಮಾರ್‌ ಲೈಂಗಿಕ ಕಿರುಕುಳ ನೀಡಿರುವುದಾಗಿ ನಟಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೇಮಂತ್‌ ಕುಮಾರ್‌

ಸಿಜೆಐ ಗವಾಯಿಗೆ ಷೂ ಎಸೆತ: ಆರೋಪಿ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸಿಎಂ ಆಗ್ರಹ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ