Featured
ಕಾಮಾಕ್ಷಿಪಾಳ್ಯದಲ್ಲಿ ರಿವರ್ಸ್ ತೆಗೆಯುತ್ತಿದ್ದ ಕಾರಿಗೆ ಮಗು ಬಲಿ
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಿವರ್ಸ್ ತೆಗೆಯುತ್ತಿದ್ದ ಕಾರು ಹರಿದು ಹನ್ನೊಂದು ತಿಂಗಳ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಗುವನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ವಾಸಿಸುತ್ತಿರುವ ಸ್ವಾಮಿ ಎಂಬವರ ಮನೆಯಲ್ಲಿ ಕುಣಿಗಲ್ನಿಂದ ಬಂದಿದ್ದ ಅಝಾನ್ ಕುಟುಂಬವು ಕಳೆದ ವಾರದಿಂದ ಬಾಡಿಗೆಗೆ ವಾಸವಾಗಿತ್ತು. ಇವರ ಕುಟುಂಬದ ಮಗು ಉಮರ್ ಫಾರೂಕ್ ಮನೆಯ ಹೊರಗೆ ಆಟವಾಡುತ್ತಿತ್ತು. ಬೆಳಗ್ಗೆ ಮನೆ ಮಾಲೀಕ ಸ್ವಾಮಿ ತಮ್ಮ ಕಾರನ್ನು
ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ, ಸಮಸಮಾಜ ಬಯಸದವರಿಂದ ಸಮೀಕ್ಷೆಗೆ ವಿರೋಧ: ಸಿಎಂ
ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ
ಪತಿ, ಮಕ್ಕಳಿದ್ದರೂ ಅಕ್ರಮ ಸಂಬಂಧ: ಪ್ರಿಯಕರನ ಜೊತೆ ತನ್ನ ಸ್ನೇಹಿತೆಯ ನೋಡಿ ಬಸವೇಶ್ವರ ನಗರದಲ್ಲಿ ಮಹಿಳೆ ಆತ್ಮಹತ್ಯೆ
ತನ್ನ ಆಪ್ತ ಸ್ನೇಹಿತೆಯೇ ತನ್ನ ಪ್ರಿಯಕರನ ಜೊತೆ ಸಂಬಂಧದಲ್ಲಿ ಇರುವುದನ್ನು ಕಂಡ ವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಬಸವೇಶ್ವರ ನಗರದ ಕೆ ಹೆಚ್ ಬಿ ಕಾಲೊನಿಯಲ್ಲಿರುವ ಓಯೋ ಚಾಂಪಿನಿಯನ್ ಕಂಫರ್ಟ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಯಶೋಧಾ (38)
ಜೈಪುರ ಆಸ್ಪತ್ರೆಯಲ್ಲಿ ಬೆಂಕಿ: ಎಂಟು ರೋಗಿಗಳು ಸಜೀವ ದಹನ
ಜೈಪುರದ ಸವಾಯಿ ಮಾನ್ ಸಿಂಗ್ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಬೆಂಕಿ ಹೊತ್ತಿಕೊಂಡು ಎಂಟು ರೋಗಿಗಳು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಐವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ
ಮತ್ತೆ ಪತಿಯೊಂದಿಗೆ ಜೀವಿಸಬೇಕೆಂದು ವಿಚ್ಛೇದಿತೆ ಮನವಿ: ನಿರಾಕರಿಸಿದ ಹೈಕೋರ್ಟ್
ಮದುವೆಯಾದ ಮಹಿಳೆ ಪತಿಯೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದೆ ಆತನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಮತ್ತೆ ಆತನೊಂದಿಗೆ ಜೀವನ ನಡೆಸಲು ಬಯಸಿದ್ದು, ಆತ ಒಪ್ಪದಿದ್ದಾಗ ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ. ಆದರೆ ಕೋರ್ಟ್ ಆಕೆಯ ಮನವಿಯನ್ನು ನಿರಾಕರಿಸಿದೆ. ಇದು ಪತಿಗೆ ಪತ್ನಿಯಿಂದ
ಚಿಕ್ಕಮಗಳೂರಿನಲ್ಲಿ ಹಸು ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕನ ವಿರುದ್ಧ ಪ್ರಕರಣ ದಾಖಲು
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್ನಿಂದ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಾಲಕ ನಡೆಸಿರುವ ಈ ದುಷ್ಕೃತ್ಯವು ಸಾರ್ವಜನಿಕರಲ್ಲಿ ಆಕ್ರೋಶವುಂಟು ಮಾಡಿದೆ. ಸಂಜೆ ರಸ್ತೆಯಲ್ಲಿ ನಿಂತಿದ್ದ ಹಸುವಿನ ಬಾಲಕ್ಕೆ ಬಾಲಕ ಕೈಯಲ್ಲಿದ್ದ ಸೆಂಟ್
ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತಕ್ಕೆ 52 ಮಂದಿ ಬಲಿ
ನೇಪಾಳದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹವುಂಟಾಗಿದ್ದು ಭೂಕುಸಿತ ಸಂಭವಿಸಿ ಕನಿಷ್ಠ 52 ಮಂದಿ ಪ್ರಾಣ ಕಳೆದುಕೊಂಡಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ. ಶನಿವಾರ ರಾತ್ರಿ ಸುರಿದ ವಯಾಪಕ ಮಳೆಯಿಂದಾಗಿ ಭೂಕುಸಿತವುಂಟಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ನಾನಾ ಕಡೆ 37 ಜನರು
ಬೆಂಗಳೂರಿನಲ್ಲಿ ಮರ ಬಿದ್ದು ಯುವತಿ ಸಾವು
ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಆರ್ಟಿ ನಗರದ ಕೀರ್ತನಾ (23) ಮೃತ ಯುವತಿ. ಕೀರ್ತನಾ ಅವರು ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್
ಕಾರ್ಮಿಕ ಮುಖಂಡ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ
ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದು ಎಲ್ಲರ ಹೃದಯಗಳನ್ನೂ ಗೆಲ್ಲುವ ಶಕ್ತಿ ಇರುವ ಗೋಪಾಲಸ್ವಾಮಿ ಹಾಸನ ಜಿಲ್ಲಾ ರಾಜಕಾರಣದ ಘನತೆಯನ್ನು ಮರುಸ್ಥಾಪಿಸುವ ಕೆಲಸವನ್ನೂ ಮಾಡಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರ
ನಾಗಮಂಗಲದಲ್ಲಿ ಆತಂಕ ಸೃಷ್ಟಿಸಿದ್ದ ಪ್ರೇತಾತ್ಮ ವೀಡಿಯೊ: ಲೈಕ್ಸ್, ವೀವ್ಸ್ಗಾಗಿ ಮಾಡಿದ್ದೆಂದು ತಪ್ಪೊಪ್ಪಿಗೆ
“ದೇವಲಾಪುರ ಹ್ಯಾಂಡ್ಪೋಸ್ಟ್ ಬಳಿ ಪ್ರೇತಾತ್ಮ” ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ನಾಗಮಂಗಲದ ಗೋಪಿ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್ಗಾಗಿ ದೆವ್ವದ ಫೇಕ್ ವೀಡಿಯೊ ಶೇರ್ ಮಾಡಿರುವುದಾಗಿ




