Featured
ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಪಾಕ್ ಸೇನೆಯ ಆಪ್ತ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಹತ್ಯೆ ಕೃತ್ಯದ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಎನ್ನುವುದು ದೃಢಪಟ್ಟಿದೆ. ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಆಗಿರುವ ಸೈಫುಲ್ಲಾ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ
ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಂಬೈ, ದಿಲ್ಲಿಗಳಲ್ಲಿ ಪೊಲೀಸ್ ಅಲರ್ಟ್
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಬೆನ್ನಲ್ಲೇ ಮುಂಬೈ ಮತ್ತು ದೆಹಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಮುಂಬೈ ಮತ್ತು ದೆಹಲಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಪ್ರವಾಸಿ ತಾಣಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ನಿಗಾ ವಹಿಸುವಂತೆ ಉನ್ನತ ಅಧಿಕಾರಿಗಳು ಸೂಚನೆ
ಮುಖೇಶ್ ದಾಳಿಗೆ ಎಲ್ ಎಸ್ ಜಿ ತತ್ತರ: ಡೆಲ್ಲಿ ಕ್ಯಾಪಿಟಲ್ಸ್ ಸುಲಭ ಜಯ
ಲಕ್ನೊ: ಮಧ್ಯಮ ವೇಗಿ ಮುಖೇಶ್ ಕುಮಾರ್ ಮಾರಕ ದಾಳಿ ಹಾಗೂ ಕೆಎಲ್ ರಾಹುಲ್ ಅಜೇಯ ಅರ್ಧಶತಕದ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ 2ನೇ ಸ್ಥಾನಕ್ಕೇರಿತು. ಲಕ್ನೋದಲ್ಲಿ
ಕನ್ನಡ ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸ್ಪ್ಯಾಮ್ ಅಲರ್ಟ್ ಡಿಸ್ಪ್ಲೇ ಪರಿಚಯ
ಬೆಂಗಳೂರು, ಏಪ್ರಿಲ್ 22, 2025: ಸುಮಾರು 27.5 ಬಿಲಿಯನ್ ಕರೆಗಳನ್ನು ಸ್ಪ್ಯಾಮ್ ಎಂದು ಫ್ಲಾಗ್ ಮಾಡಿದ ತನ್ನ ಎಐ-ಚಾಲಿತ ಸ್ಪ್ಯಾಮ್ ಪತ್ತೆಹಚ್ಚುವಿಕೆ ಸಾಧನವನ್ನು ಆರಂಭಿಸಿದ ಬೆನ್ನಲೇ, ಏರ್‌ಟೆಲ್ ಇಂದು ಸ್ಪ್ಯಾಮರ್ ಗಳಿಗೆ ಮೂಗುದಾರ ಕಟ್ಟಲು ಎರಡು ಗಮನಾರ್ಹ ಸುಧಾರಣೆಗಳನ್ನು ಪರಿಚಯಿಸಿದೆ. ಗ್ರಾಹಕರು
ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ 14ಕ್ಕೆ ಸುಪ್ರೀಂ ಮುಂದೂಡಿಕೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗೆ ಬಂದಿದ್ದು, ಜಾಮೀನು ಆದೇಶ ಪ್ರಶ್ನಿಸಿ
ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಸಿಎಂ ಸೂಚನೆ
ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ ಇಲಾಖಾವಾರು
ಜಮ್ಮು ಕಾಶ್ಮೀರದಲ್ಲಿ ಇಬ್ಬರು ವಿದೇಶಿಯರು ಸೇರಿ 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರು!
ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಕ್ರೌರ್ಯ ಮೆರೆದಿರುವ ಉಗ್ರರು ಇಬ್ಬರು ವಿದೇಶಿಯರು ಸೇರಿದಂತೆ 26 ಪ್ರವಾಸಿಗರನ್ನು ಹತ್ಯೆಗೈದಿದ್ದಾರೆ. ಬಾಯಿಸರಣ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಏಕಾಏಕಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ಹಲವು ಕಡೆ ಗುಂಡಿನ ದಾಳಿ
ಮೋದಿಗೆ ಹೋಗಿ ಹೇಳು ಎಂದ ಉಗ್ರ: ಘಟನೆ ವಿವರಿಸಿದ ಪತ್ನಿ ಪಲ್ಲವಿ
ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರನ್ನು ಹತ್ಯೆಗೈದ ಉಗ್ರರು ಇದನ್ನು ಮೋದಿಗೆ ಹೋಗಿ ಹೇಳು ಎಂದು ಹೇಳಿದ್ದಾರೆ ಎಂದು ಪತ್ನಿ ಪಲ್ಲವಿಗೆ ಹೇಳಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದಾಗ
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್
ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲ ಎಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
ಮಂಡ್ಯ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ