Menu

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಯೂ ಮುಖ್ಯ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: “ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಎದುರು, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “2026ರ ಸಾಲಿನ ವಾರ್ಷಿಕ

ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಸಿತ: ವಾಹನ ಸವಾರರ ಪರದಾಟ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಭೂಮಿ ಕುಸಿದಿದ್ದು ವಾಹನ ಸವಾರರು ಹೈರಾಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಡೈರಿ ಬಳಿ ನಡೆದಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್‌ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯಲ್ಲಿ ಮತ್ತೊಮ್ಮೆ

ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ. ಕಲ್ಟ್ ಚಿತ್ರದ ಬ್ಯಾನರ್ ವಿಷಯದಲ್ಲಿ ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕಾಂಗ್ರೆಸ್

ಯಾದಗಿರಿಯಲ್ಲಿ ಶಿಕ್ಷಕರು ಬೈದರೆಂದು ಬಾಲಕ ಆತ್ಮಹತ್ಯೆ

ಯಾದಗಿರಿಯಲ್ಲಿ ಶಿಕ್ಷಕರು ಬೈದರೆಂದು ಮನ ನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಆತ್ಮಹತ್ಯೆ ಮಾಡಿಕೊಂಡ ಒಂಬತ್ತನೇ ತರಗತಿಯ ವಿದ್ಯಾರ್ಥಿ.

ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರಿಗೆ ವಿಶ್ವದಲ್ಲೇ ನಂ.2!

ಜಗತ್ತಿನ ಅತ್ಯಂತ ಹೆಚ್ಚು ವಾಹನ ದಟ್ಟಣೆಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಮತ್ತೊಮ್ಮೆ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಮೆಕ್ಸಿಕೊ ಮೊದಲ ಸ್ಥಾನ ಪಡೆದಿದೆ. ಟಾಮ್ ಟಾಮ್ ಟ್ರಾಫಿಕ್ ಇಂಡೆಕ್ಸ್ -2025 ಸಂಸ್ಥೆ ಜಗತ್ತಿನಾದ್ಯಂತ 500 ನಗರಗಳ ಸಮೀಕ್ಷೆ ನಡೆಸಿದ್ದು, 34 ನಗರದೊಳಗೆ

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿ ಹೈಕೋರ್ಟ್‌ ಆದೇಶ

ಬೈಕ್ ಟ್ಯಾಕ್ಸಿ ನಿಷೇಧಿಸಿ ಸರ್ಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಕಾನೂನಿನಡಿ ಸರ್ಕಾರ ಅನುಮತಿ ನೀಡಬೇಕು ಎಂದು ಹೇಳಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ ಬೈಕ್ ಟ್ಯಾಕ್ಸಿಗೆ ಅನುಮತಿ

ಕುಕಿ ಪ್ರೇಯಸಿ ಭೇಟಿಗೆ ಬಂದ ಮೈಥಿಯಿ ಪ್ರಿಯಕರನ ಗುಂಡಿಕ್ಕಿ ಕೊಲೆ: ಮಣಿಪುರ ಮತ್ತೆ ಉದ್ವಿಗ್ನ

ಕುಕಿ ಸಮುದಾಯದ ತನ್ನ ಪ್ರೇಯಸಿಯ ಭೇಟಿಗಾಗಿ ಬಂದಿದ್ದ ಮೈಥಿಯಿ ಯುವಕನ ಕೈಕಾಲು ಕಟ್ಟಿ ಹಾಕಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಣಿಪುರದ ಚುರಾಚಂದ್‌ಪುರದಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಮಣಿಪುರ ಮತ್ತೆ ಉದ್ವಿಗ್ನಗೊಂಡಿದೆ. ಮಣಿಪುರವು ಕುಕಿ ಹಾಗೂ ಮೈಥಿಯಿ ಸಮುದಾಯಗಳ ನಡುವಿನ ಸಂಘರ್ಷದಿಂದ

ದೆಹಲಿ ಗಣರಾಜ್ಯೋತ್ಸವ 2026: “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ರಾಜ್ಯದ ಟ್ಯಾಬ್ಲೋ

2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ  ರಾಜ್ಯದ  “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿಯಿಂದ ಕೈಗಾರಿಕೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ  ಹೆಗ್ಗಳಿಕೆಯನ್ನು ಸಂಕೇತಿಸುವಂತೆ ಕೆಂಪು ಕೋಟೆಯಲ್ಲಿ 

ನಾಳೆಯಿಂದ ಜ.27ರವರೆಗೆ ಬ್ಯಾಂಕ್‌ಗಳಿಗೆ ರಜೆ

ಜನವರಿ 24 ಶನಿವಾರದಿಂದ 27 ಮಂಗಳವಾರದವರೆಗೆ ಸತತ 4 ದಿನ ಬ್ಯಾಂಕುಗಳಿಗೆ ರಜೆ ಇದೆ. ಜನವರಿ 26ರಂದು ಗಣರಾಜ್ಯೋತ್ಸವ ರಜೆ ಇರುತ್ತದೆ. 27ರಂದು ಬ್ಯಾಂಕ್ ನೌಕರರ ಮುಷ್ಕರ ನಿಗದಿಯಾಗಿದೆ. ಎಲ್ಲಾ ಶನಿವಾರ ಮತ್ತು ಭಾನುವಾರಗಳನ್ನು ವಾರದ ರಜೆಗಳನ್ನಾಗಿ ಮಾಡಬೇಕು ಎಂದು ಆಗ್ರಹಿಸಿ

ಶಿಕಾರಿಪುರದಲ್ಲಿ ಕರಡಿ ದಾಳಿ: ತೀವ್ರ ಗಾಯಗೊಂಡ ಕೃಷಿಕ

ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮ ಸಮೀಪದ ಗಂಗವ್ವನ ಸರ ಮೀಸಲು ಅರಣ್ಯ ಪ್ರದೇಶದಲ್ಲಿ ಹಾರೋಗೊಪ್ಪ‌ ಗ್ರಾಮದ ಕೃಷಿಕ ಸೋಮ್ಲನಾಯ್ಕ(60) ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ರೈತ  ಸೋಮ್ಲನಾಯ್ಕ  ಜಮೀನಿನಲ್ಲಿ ಅಳವಡಿಸಿದ್ದ ಮೋಟರ್ ಆನ್​ ಮಾಡಲು  ಹೋಗಿದ್ದಾಗ ಕರಡಿ