Menu

ಕೇಂದ್ರದಿಂದ ಕುಟುಂಬದ ಸ್ಥಿತಿಗತಿ, ಜಾತಿ ವಿವರ ಒಳಗೊಂಡ ಗಣತಿ ವೇಳಾಪಟ್ಟಿ ಪ್ರಕಟ

ಕೇಂದ್ರದಿಂದ ನಡೆಯಲಿರುವ ಜನಗಣತಿಗೆ ಗೃಹ ಸಚಿವಾಲಯ ವೇಳಾ ಪಟ್ಟಿ ಪ್ರಕಟಿಸಿದೆ. ಮನೆಪಟ್ಟಿ ಹಾಗೂ ಮನೆಗಣತಿ ಮತ್ತು ಜನಗಣತಿ ಹಂತಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 2021ರ ಜನಗಣತಿಗೆ ಸಿದ್ಧಪಡಿಸಿದ್ದ ಎಲ್ಲ 33 ಪ್ರಶ್ನೆಗಳನ್ನೇ ಈ ಬಾರಿಯೂ ಬಳಸಿಕೊಳ್ಳಲಿದೆ. ಕೋವಿಡ್-19 ಕಾರಣದಿಂದ 2021ರ ಜನಗಣತಿ ಮುಂದೂಡಿಕೆಯಾಗಿತ್ತು. ಮನೆ ಭೇಟಿ ಹಂತದಲ್ಲಿ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಮಾಹಿತಿ ಸಂಗ್ರಹ ನಡೆಯಲಿದೆ. ಕಟ್ಟಡ ಸಂಖ್ಯೆ, ಗಣತಿ ಮಾಡಲಾಗುವ ಮನೆಯ ಮಹಡಿ, ಗೋಡೆ ಮತ್ತು ಛಾವಣಿಗೆ

ಬಳ್ಳಾರಿಯಿಂದ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 523 ಚೀಲ ಪಡಿತರ ಅಕ್ಕಿ ವಶ

ಬಳ್ಳಾರಿಯಿಂದ  ಗುಜರಾತ್‌ಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 523 ಚೀಲ ಪಡಿತರ ಅಕ್ಕಿಯನ್ನು ಸಹಾಯಕ ಆಯುಕ್ತ ರಾಜೇಶ್ ಹೆಚ್. ಡಿ  ತಂಡ ಎಸ್.ಎಲ್.ಎನ್ ಮಾಲ್ ಬಳಿ ಇರುವ ಪುಲ್ಲಯ್ಯ ಕಾಂಪೌಂಡನ ಒಳ ಆವರಣದಲ್ಲಿ ತಡೆ ಹಿಡಿದಿದೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಅಡ್ಡೆ

ಇಂದಿರಾನಗರದಲ್ಲಿ ‘ಒರಿಜಿನಲ್‌ ಮೈಲಾರಿ ಹೋಟೆಲ್‌-1938’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ  ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ  ಸಿಎಂ ಸಿದ್ದರಾಮಯ್ಯ

ಪಿಣರಾಯಿ ಎನ್‌ಡಿಎ ಸೇರಿದ್ರೆ ಮೋದಿಯಿಂದ ಕೇರಳಕ್ಕೆ ಬೃಹತ್‌ ಪ್ಯಾಕೇಜ್‌? ಕೇಂದ್ರದ ಅನುದಾನ ಭಿಕ್ಷೆಯಲ್ಲ, ಹಕ್ಕು ಎಂದ ಸಿಪಿಎಂ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಬೇಕು. ಇದರಿಂದ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬರಲು ಸಾಧ್ಯ. ವಿಜಯನ್ ಎನ್‌ಡಿಎ ಸೇರಿದರೆ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ

ಪತ್ನಿಗೆ ಗುಂಡಿಕ್ಕಿ ಕೊಂದು ಪೊಲೀಸರ ಸಮ್ಮುಖ ಸುಸೈಡ್‌ ಮಾಡಿಕೊಂಡ ಪತಿ

ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿ ನಡೆದಿದೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಶಕ್ತಿಸಿಂಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ಅವರು ಪತ್ನಿ ರಾಜೇಶ್ವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು, ನಂತರ ಪೊಲೀಸರ ಎದುರೇ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಯಶ್‌ರಾಜ್

ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲವೆಂದು ಹೆಂಡತಿಯ ಕಿರಿಕಿರಿ: ಕೊಲೆಗೈದು ಹೃದಯಾಘಾತ ಕತೆ ಕಟ್ಟಿದ ಗಂಡ

ಬೆಳಗಾವಿಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆ ಆಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಗಂಡನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿ ರಾಜೇಶ್ವರಿ (21) ಕೊಲೆಯಾಗಿದ್ದು, ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಆರೋಪಿ. ಪತ್ನಿಯನ್ನು

ಮನೆಯವರ ವಿರೋಧವಿದ್ದರೂ ಮದುವೆ: ಯುವ ಜೋಡಿಯನ್ನು ಹತ್ಯೆಗೈದ ಕುಟುಂಬ

ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದ ಯುವ ಜೋಡಿಯನ್ನು ಯುವತಿಯ ಸಹೋದರರು ಕೊಂದು ಹೊಲದಲ್ಲಿ ಹೂತು ಹಾಕಿರು ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ  ನಡೆದಿದೆ. ಈ ಜೋಡಿ ಕೊಲೆಗೆ ಸಂಬಂಧಿಸಿದಂತೆ ಯುವತಿಯ ಸೋದರರನ್ನು ಬಂಧಿಸಲಾಗಿದೆ. ಕಾಜಲ್‌ ಮತ್ತು ಆಕೆಯ ಸಂಗಾತಿ ಅರ್ಮಾನ್‌

ರಾಜ್ಯಪಾಲರ ಮುಂದಿಟ್ಟು ಆಟ: ಒಕ್ಕೂಟ ವ್ಯವಸ್ಥೆಯ ಕೆಟ್ಟ ಪರಂಪರೆ

ಕೇಂದ್ರ ಮತ್ತು ರಾಜ್ಯ ನಡುವೆ ಕಾನೂನಿನ ಕೊಂಡಿ ಮತ್ತು ರಾಜ್ಯಾಡಳಿತಕ್ಕೆ ಹೊಣೆಗಾರರಾದ ರಾಜ್ಯಪಾಲರು ಮತ್ತು ಲೋಕಭವನಕ್ಕೆ ರಾಜಕೀಯ ಲೇಪ ಹಚ್ಚಿ ಇವರನ್ನು ತೊಗಲುಗೊಂಬೆಯಾಗಿ ಪರಿಗಣಿಸಿ ಆಟವಾಡುವುದು ಕೇಂದ್ರದ ಕೆಟ್ಟ ರಾಜಕೀಯ ಪರಂಪರೆ ಎನ್ನದೆ ವಿಧಿಯಿಲ್ಲ. ರಾಜ್ಯಪಾಲರಾದವರ ಕರ್ತವ್ಯಗಳು ಮತ್ತು ವಿಧಿ ನಿರ್ವಹಣೆಗಳ

ಮುಡಾ ಹಗರಣ: 460 ಕೋಟಿ‌ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ಮುಡಾ ಹಗರಣ ಪ್ರಕರಣದಲ್ಲಿ 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (ಇಡಿ) ಜ.21ರಂದು 10 ಸ್ಥಿರ ಆಸ್ತಿಗಳನ್ನು ಅಂದರೆ 6 ಅಕ್ರಮವಾಗಿ

ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ, ಅಲೆಮಾರಿ ಸಮುದಾಯಕ್ಕೆ ಮನೆ: ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: 2027, ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಈ ಮೂಲಕ  ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ