Featured
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಕಾರಣ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ನಿತ್ಯದ ಚೆಕಪ್ ನಡೆಸಿಇಸಿಜಿ ಪರೀಕ್ಷೆ ಮಾಡಿದ್ದು, ಖರ್ಗೆಯವರು ಇಂದು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಬಿಹಾರ ಚುನಾವಣೆ ಪ್ರಯುಕ್ತ ಸರಣಿ ಪ್ರವಾಸ, ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಬಿಹಾರ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿ
ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್ : ಮೋದಿ, ಶಾ ಮೌನ ಸಮ್ಮತಿಯೇ- ಸಿಎಂ ಸಿದ್ದರಾಮಯ್ಯ
ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ
550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹1100 ಕೋಟಿ ರೂ. ವೆಚ್ಚದ ಕಾರ್ಯಯೋಜನೆ: ಡಿಸಿಎಂ
ಬೆಂಗಳೂರಿನಲ್ಲಿ ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು (ಮಾಧ್ಯಮಗಳು) ಕೂಡ ಪರಿಶೀಲನೆ ಮಾಡಬಹುದು. 550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹1100 ಕೋಟಿ ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ” ಎಂದು ಡಿಸಿಎಂ
ಕುಮಾರಸ್ವಾಮಿ ಹಿಟ್ ಅಂಡ್ ರನ್ ಸಾಕು, ನನ್ನ ವಿರುದ್ಧ ದಾಖಲೆ ಜನರ ಮುಂದಿಡಿ: ಡಿಕೆ ಶಿವಕುಮಾರ್ ಸವಾಲು
ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು
ಕಲ್ಯಾಣ ಕರ್ನಾಟಕ ನೆರೆ ಹಾನಿ: NDRF ಪರಿಹಾರ ಜೊತೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ
ನೆರೆಹಾವಳಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಆಗಿರುವ ಬೆಳೆಹಾನಿ, ಮನೆ ಕುಸಿತ, ಮೂಲಸೌಕರ್ಯಗಳ ಹಾನಿಗಳ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ NDRF ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ
ನೆರೆ ಸಂತ್ರಸ್ತರಿಗೆ ಬದುಕು ಕಟ್ಟಿಕೊಡಲು ಸರ್ಕಾರ ಮತ್ತು ಅಧಿಕಾರಿಗಳ ಪ್ರಾಮಾಣಿಕ ಕಾರ್ಯ ನಿರ್ವಹಣೆ ಅಗತ್ಯ
ನೆರೆ ಸಂತ್ರಸ್ತರ ನಿಜವಾದ ಬವಣೆಯನ್ನು ಅರಿತು ಸರ್ಕಾರ ಮತ್ತು ಸಂತ್ರಸ್ತ ಪರಿಹಾರ ಕಾರ್ಯದಲ್ಲಿ ತೊಡಗಿದ ಪ್ರತಿಯೋರ್ವ ಅಧಿಕಾರಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಿದೆ. ರಾಜ್ಯದ ಉತ್ತರ ಭಾಗದಲ್ಲಿ ಭಾರಿ ಮಳೆ. ಇದರಿಂದ ಅಪಾರ ಆಸ್ತಿ -ಪಾಸ್ತಿ ನಷ್ಟ. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ
ಸಂತ್ರಸ್ತರಿಗೆ ಪರಿಹಾರ ಘೋಷಿಸಿ ಸಿಎಂ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು: ಆರ್.ಅಶೋಕ
ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು
ಗರ್ಭಪಾತಕ್ಕೆ ಒತ್ತಾಯಿಸಿದ ಗೆಳೆಯನ ಕತ್ತು ಸೀಳಿ ಕೊಲೆಗೈದ ಅಪ್ರಾಪ್ತ ವಯಸ್ಕ ಗರ್ಭಿಣಿ
ಛತ್ತೀಸ್ಗಢದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯೊಬ್ಬಳು ತನ್ನ ಗೆಳೆಯನ ಕತ್ತು ಸೀಳಿ ಹತ್ಯೆ ಮಾಡಿದ್ದಾಳೆ. ರಾಯ್‌ಪುರ ಪೊಲೀಸರು ಛತ್ತೀಸ್ಗಢ ನಗರದ ಗಂಜ್ ಪೊಲೀಸ್ ಠಾಣೆ ಪ್ರದೇಶದ ಲಾಡ್ಜ್‌ನಿಂದ ಯುವಕನ ಶವವನ್ನು ವಶಪಡಿಸಿಕೊಂಡಿದ್ದಾರೆ. ಕೊಲೆಗೈದ ಬಳಿಕ ಬಿಲಾಸ್‌ಪುರಕ್ಕೆ ಹಿಂತಿರುಗಿದ ಗರ್ಭಿಣಿ ಬಾಲಕಿ ತನ್ನ
ಕಲ್ಯಾಣ ಕರ್ನಾಟಕದಲ್ಲಿ ಮಳೆ ಹಾನಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
ಕಲಬುರಗಿ ವಿಮಾನ ನಿಲ್ದಾಣಲ್ಲೇ ಪ್ರಾಥಮಿಕ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರವಾಹ ಹಾನಿ ವಿವರಗಳನ್ನು ಪಡೆದುಕೊಂಡರು. ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು 1




