Menu

ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಅಕ್ರಮ ಶ್ರೀಲಂಕಾ ವಲಸಿಗರು ಅರೆಸ್ಟ್‌

ಶ್ರೀಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ ಬಂದ ಮೂವರು ಬೆಂಗಳೂರಿನ ದೇವನಹಳ್ಳಿ ಠಾಣಾ ವ್ಯಾಪ್ತಿಯ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸವಿದ್ದರು. ಶ್ರೀಲಂಕಾದ ಜಾಫ್ನಾದಿಂದ ಬೋಟ್​ ಮೂಲಕ ತಮಿಳುನಾಡಿಗೆ ಬಂದಿಳಿದಿದ್ದ ಅವರು ರಾಮೇಶ್ವರಂಗೆ ಹೋಗಿದ್ದರು. ಸ್ಥಳೀಯ ವ್ಯಕ್ತಿಯೊಬ್ಬನ ಸಹಾಯ

ಸಿಸಿ ಮತ್ತು ಒಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಸಮಸ್ಯೆ: ಸಿಎಂ ಸಭೆಯಲ್ಲಿ ಚರ್ಚೆ

2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಒಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿ  ಗೃಹಕಚೇರಿ ಕೃಷ್ಣಾದಲ್ಲಿ  ಸಭೆ ನಡೆಸಿ ಅಗತ್ಯ ಕ್ರಮಗಳ ಬಗ್ಗೆ

ಸಾಮಾಜಿಕ, ಆರ್ಥಿಕ,ಶೈಕ್ಷಣಿಕ ಸಮಾನತೆ ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದೇ ಗಣತಿಯ ಉದ್ದೇಶ : ಸಿಎಂ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ”,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ

ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು

ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯು, ಬೆಂಗಳೂರಿನಲ್ಲಿ 2478 ಪ್ರಕರಣ

ರಾಜ್ಯದಲ್ಲಿ ಒಂದೆಡೆ ಮಳೆಯ ಅವಾಂತರವಾದರೆ ಮತ್ತೊಂದೆಡೆ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದು, ಐದಕ್ಕಿಂತ ಹೆಚ್ಚು ಸಾವುಗಳಾಗಿವೆ. ಸತತ ಮಳೆಯಿಂದಾಗಿ ಡೆಂಗ್ಯು ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 5093 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2478 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು

ಬೆಂಗಳೂರಿನಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್ , 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482

ರಂಗಕರ್ಮಿ ಯಶವಂತ ಸರದೇಶಪಾಂಡೆ ಇನ್ನಿಲ್ಲ

ನಗೆ ನಾಟಕಗಳ ಬಾದ್‌ಶಾ ಎಂದು ಹೆಸರಾಗಿರುವ ರಂಗಕರ್ಮಿ ನಟ, ನಿರ್ದೇಶಕ, ನಾಟಕಕಾರ  ಯಶವಂತ ಸರದೇಶಪಾಂಡೆ (೬೦) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.  ಇತ್ತೀಚೆಗಷ್ಟೇ ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾಮಿಂಗ್ ಆರ್ಟ್ಸ್‌ನಲ್ಲಿ ‘ಉತ್ತರೋತ್ತಮ ಉತ್ಸವ – 2025’ ನಡೆಯಿತು. ಯಶವಂತ್ ಸರ್‌ದೇಶಪಾಂಡೆ ಅವರ 60ನೇ ಹುಟ್ಟುಹಬ್ಬದ

ಆಯುಧಪೂಜೆ ದಿನ ವಾಹನ ತೊಳೆಯಲು ಕಾವೇರಿ ನೀರು ಬಳಸುವಂತಿಲ್ಲ

ಆಯುಧ ಪೂಜೆ  ದಿನ ಕುಡಿಯಲು ಪೂರೈಕೆಯಾಗುವ ಕಾವೇರಿ ನೀರಲ್ಲಿ ಕಾರು, ಬೈಕ್ ಸೇರಿದಂತೆ ವಾಹನಗಳನ್ನು ತೊಳೆಯುವಂತಿಲ್ಲ. ದಸರಾ ಹಬ್ಬದ ಸಂಭ್ರಮಕ್ಕೆ ಕಾವೇರಿ ನೀರು ಪೋಲು ಮಾಡಿದರೆ ದಂಡ ಪಾವತಿಸಬೇಕಾಗಬಹುದು. ಕಾವೇರಿ ನೀರು ಕುಡಿಯುವುದಕ್ಕೆ ಬಳಕೆಗೆ ಸರಬರಾಜಾಗುವುದು. ಅನಗತ್ಯವಾಗಿ ನೀರು ಪೋಲು ಮಾಡುವುದು,

ಶಿರಾದಲ್ಲಿ ರಸ್ತೆ ಅಪಘಾತ: ಮೂವರು ಬಲಿ

ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಭಾನುವಾರ ರಾತ್ರಿ ಎರಡು ಬೈಕ್‌ಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್ (36) ಮತ್ತು ವೆಂಕಟಧನಶೆಟ್ಟಿ (64), ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24) ಮೃತಪಟ್ಟವರು.

ಜನಗಣತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿ ನೀಡಬೇಡಿ: ಆರ್‌.ಅಶೋಕ

ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ