Featured
ಬೀಳಗಿಯಲ್ಲಿ ಕಾರು ಟಂಟಂ ಡಿಕ್ಕಿ: ಇಬ್ಬರ ಸಾವು
ಬಾಗಲಕೋಟೆ ಜಿಲ್ಲೆಯ ಬೀಳಗಿ ಅನಗವಾಡಿ ಬ್ರಿಡ್ಜ್ ಬಳಿ ಕಾರು ಮತ್ತು ಟಂಟಂ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಊಟಕ್ಕೆಂದು ಸಮೀಪದ ವಿಜಯಪುರದ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದಾಗ ಅಪಘಾತ ನಡೆದಿದೆ.
ವರ್ಕ್‌ಫ್ರಮ್ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ
ಆನ್‌ಲೈನ್‌ನಲ್ಲಿ ವರ್ಕ್‌ಫ್ರಮ್ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಟೆಲಿಗ್ರಾಂ ಆ್ಯಪ್ ಮೂಲಕ ‘ವರ್ಕ್‌ಫ್ರಮ್ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್ ಕ್ಲಿಕ್ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್ ಕ್ಲಿಕ್
ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್
ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ
Karur Stampede- ಕರೂರ್ ರ‍್ಯಾಲಿ ದುರಂತ: ವಿಜಯ್ ದಳಪತಿ ಮನೆಗೆ ಬಾಂಬ್ ಬೆದರಿಕೆ
ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿ 30ಕ್ಕೂ ಹೆಚ್ಚು ಜನ ಮೃತಪಟ್ಟ ಬಳಿಕ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ
ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ
ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ
ರೈತರ ಒಂದಿಂಚೂ ಭೂಮಿಯನ್ನ ಕಸಿಯಲು ಬಿಡಲ್ಲ: ನಿಖಿಲ್ ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡದಿಯ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೇ ವಿಧಾನಸೌಧ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು. ಬಿಡದಿಯಲ್ಲಿ ಟೌನ್ ಶಿಪ್
ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ತುರ್ತು ಕ್ರಮಕ್ಕೆ ಸಿಎಂ ಸೂಚನೆ
ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಹದ ಸಮಸ್ಯೆ ನಿರ್ವಹಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಅರೆಸ್ಟ್
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ದೆಹಲಿ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ, ಪ್ರಕರಣ ಬಹಿರಂಗವಾದ ನಂತರ ತಲೆಮರೆಸಿಕೊಂಡಿದ್ದನು.
ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯುವ ಲಕ್ಷಣಗಳಿವೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 4ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ




