ಫೆಬ್ರವರಿ 1 ಭಾನುವಾರದಂದು 2026-27ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದಾರೆ.
ಫೆಬ್ರವರಿ ೧ರಂದು ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಜನವರಿ 29ರಂದು ಆರ್ಥಿಕ ಸಮೀಕ್ಷೆ ವರದಿ ಮಂಡನೆ ಮಾಡಲಿದೆ.
1999ರಲ್ಲಿ ಮೊದಲ ಬಾರಿ ಭಾನುವಾರದಂದು ಬಜೆಟ್ ಮಂಡನೆ ಆಗಿದ್ದು. ಆದಾದ ನಂತರ ಇತಿಹಾಸದಲ್ಲಿ ಎರಡನೇ ಬಾರಿ ಭಾನುವಾರದಂದು ಬಜೆಟ್ ಮಂಡನೆ ಆಗಲಿದೆ. ಸಾಮಾನ್ಯವಾಗಿ ವಾರಾಂತ್ಯವಾದ ಶನಿವಾರ ಮತ್ತು ಭಾನುವಾರ ಲೋಕಸಭೆ ಅಧಿವೇಶನಕ್ಕೆ ರಜೆ ಇರುತ್ತದೆ.
ಜನವರಿ ೨೮ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮರ್ಮು ಸಂಸತ್ ನ ಉಭಯ ಸದನಗಳನ್ನೊಳಗೊಂಡ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖರು ಉಪಸ್ಥಿತರಾಗಲಿದ್ದಾರೆ.
1999 ಫೆಬ್ರವರಿ 28ರಂದು ಭಾನುವಾರ ಮೊದಲ ಬಾರಿಗೆ ಅಂದಿನ ಕೇಂದ್ರ ಹಣಕಾಸು ಸಚಿವರಾಗಿದ್ದ ಯಶವಂತ್ ಸಿನ್ಹಾ 1999-2000ನೇ ಸಾಲಿನ ಬಜೆಟ್ ಮಂಡಿಸಿದ್ದರು.


