ನವದೆಹಲಿ: ಕೇಂದ್ರ ಸರ್ಕಾರ ಆಗಸ್ಟ್ 15ರಿಂದ 3,000 ರೂ. ಬೆಲೆಯ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪರಿಚಯಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಬುಧವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆಗಸ್ಟ್ 15 ರಿಂದ ನೀಡಲಾಗುವ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಒಂದು ವರ್ಷ ಅವಧಿಯ ಫಾಸ್ಟ್ ಟ್ಯಾಗ್ ಪಾಸ್ ಗಳನ್ನು ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಾಣಿಜ್ಯೇತೇರ ಬಳಕೆಯ ವಾಹನಗಳು ಒಂದು ವರ್ಷದಲ್ಲಿ ಗರಿಷ್ಠ 200 ಟ್ರಿಪ್ ಅಥವಾ 3000 ರೂ.ವರೆಗೆ ಯಾವುದು ಮೊದಲು ಬರುತ್ತದೆಯೋ ಅದು ಅನ್ವಯವಾಗುವಂತೆ ಫಾಸ್ಟ್ ಟ್ಯಾಗ್ ಪಾಸ್ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ವೆಚ್ಚ-ಪರಿಣಾಮಕಾರಿ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ. ಸಕ್ರಿಯಗೊಳಿಸುವಿಕೆ ಮತ್ತು ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಸಂಘ) ಮತ್ತು MoRTH (ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ) ದ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುವುದು” ಎಂದು ಅವರು ಹೇಳಿದರು.