10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಎನ್‌ಡಿಎ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಸೇರಿತೆ ಹತ್ತೊಂಬತ್ತು ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಇವರಿಬ್ಬರು ಹಿಂದಿನ ಅವಧಿಯಲ್ಲೂ ಡಿಸಿಎಂ ಆಗಿದ್ದರು.
ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ನಾಗಾಲ್ಯಾಂಡ್ ಸಿಎಂಯು ರಿಯೊ, ಆಂಧ್ರಪ್ರದೇಶಸಿಎಂ. ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಮತ್ತು ಉತ್ತರಾಖಂಡ್ ಸಿಎಂರ್ ಸಿಂಗ್ ಧಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು. ಎಲ್‌ಜೆಪಿ (ಆರ್‌ವಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇತ್ತೀಚೆಗೆ ಈ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿದೆ. ಮಹಾಘಟಬಂಧನ್ 35 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿತೀಶ್ ಕುಮಾರ್ ಅವರ ಆರ್‌ಜೆಡಿ ಪಕ್ಷ ಕೂಡ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗಳಿಸಿದೆ.


