ಸಿಎಂ ಬದಲಾವಣೆಯಿಲ್ಲ:ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪುನರುಚ್ಛಾರ

ಸಿಎಂ ಬದಲಾವಣೆಯಿಲ್ಲ:ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪುನರುಚ್ಛಾರ

ಬೆಂಗಳೂರು,ಜೂ.16 ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಪುನರುಚ್ಛರಿಸಿದ್ದಾರೆ.
ಪಕ್ಷ ಸಂಘಟನೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಮೂರು ದಿನಗಳ ಕಾಲ ಪ್ರವಾಸಕ್ಕೆ ಆಗಮಿಸಿರುವ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳೂ ಆಗಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.
ನಗರದ ಕುಮಾರಕೃಪ ಅತಿಥಿಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್‌ಸಿಂಗ್,ಮೂರು ದಿನಗಳ ಕಾಲ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಪಕ್ಷ ಸಂಘಟನೆ ಬಗ್ಗೆ ಸೇರಿದಂತೆ ಪಕ್ಷದ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ರಾಜ್ಯದಲ್ಲಿ ಕರೋನಾ ನಿರ್ವಹಣೆಗೆ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ.ಈ ಸರ್ಕಾರದಲ್ಲಿ
ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಸಚಿವರು ಚೆನ್ನಾಗಿಯೇ ಕೆಲಸ ಮಾಡಿದ್ದಾರೆ.ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ
ಮೃತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಉತ್ತಮ ನಿರ್ಧಾರವಾಗಿದೆ.
ಯಡಿಯೂರಪ್ಪ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಯಾವುದೇ ಕಾರಣಕ್ಕೂ ಸಿಎಂ ಹುದ್ದೆಯಿಂದ ಅವರನ್ನು ಕೆಳಗಿಳಿಸುವುದಾಗಲಿ ಸಿಎಂ ಬದಲಾವಣೆಯಾಗಲಿ ಇಲ್ಲ ಎನ್ನುವುದನ್ನು ಸಾರಿಸಾರಿ ಹೇಳುವುದಾಗಿ ಅರುಣ್ ಸಿಂಗ್ ತಿಳಿಸಿದರು.

ಬಿಜೆಪಿಯನ್ನು ಈ ಸರ್ಕಾರವನ್ನು ಟೀಕಿಸುವ ಜೆಡಿಎಸ್ ಪಕ್ಷವೇ ಕ್ವಾರಂಟೈನ್‌ನಲ್ಲಿ ಇದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅರುಣ್‌ಸಿಂಗ್ ಉತ್ತರಿಸಿದರು.

, ,

Leave a Reply

Your email address will not be published. Required fields are marked *