Menu

ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್‌ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಪತಿ ಕೆ.ಎನ್.ಹರೀಶ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಾಜೇಶ್ವರಿನಗರ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ಪ್ರಕರಣ ಸಂಬಂಧ ವಿರುದ್ಧ ರಾಜ ರಾಜೇಶ್ವರಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಾ ಗೌಡ ಮತ್ತು ಕೆ.ಎನ್.ಹರೀಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಆರ್.ಕೃಷ್ಣಮೂರ್ತಿ ಅವರ ಪೀಠ ಈ ಆದೇಶ ಮಾಡಿದೆ.

ಅರ್ಜಿದಾರರ ಪರ ವಾದ ಆಲಿ ಸಿದ ನ್ಯಾಯಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೂ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಪ್ರತಿವಾದಿ ಗಳಾಗಿರುವ ಆರ್.ಆರ್.ನಗರ ಠಾಣೆಯ ಪೊಲೀಸರು ಮತ್ತು ದೂರುದಾರೆ ಡಾ. ಮಂಜುಳಾ ಎ.ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಗೋಲ್ಡ್ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿದರೆ ಒಳ್ಳೆಯ ಲಾಭ ಬರಲಿದೆ ಎಂದು ತಿಳಿಸಿ 2022ರ ಮಾರ್ಚ್ ನಿಂದ 2024ರ ಡಿಸೆಂಬರ್ ವರೆಗೆ ವಿವಿಧ ಹಂತಗಳಲ್ಲಿ ನನ್ನಿಂದ ₹2.52 2.2.350 ಗ್ರಾಂ ಚಿನ್ನಾಭರಣ ಪಡೆದ ಐಶ್ವರ್ಯಾ ಗೌಡ ಮತ್ತು ಹರೀಶ್ ನಂತರ ಹಣ ಹಾಗೂ ಚಿನ್ನ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ಡಾ. ಮಂಜುಳಾ ಎ.ಪಾಟೀಲ್ ದೂರು ನೀಡಿದ್ದರು.

ಐಶ್ವರ್ಯಾ ಗೌಡ ಹಲವರಿಗೆ ಬ್ಯುಸಿನೆಸ್‌ ಹೆಸರಲ್ಲಿ ಹಣ ಪಡೆದು ವಂಚಿಸಿದ್ದು, ಆ ಸಂಬಂಧ ಪ್ರಕರಣಗಳು ದಾಖಲಾಗಿವೆ.

Related Posts

Leave a Reply

Your email address will not be published. Required fields are marked *