Menu

ಮಹಾಕುಂಭ ದಿನಾಂಕ ವಿಸ್ತರಣೆ ಇಲ್ಲ!

kumba mela

ಪ್ರಯಾಗ್ ರಾಜ್: ಮಹಾಕುಂಭವು ಪೂರ್ವ ನಿರ್ಧಾರಿತವಾದಂತೆ ಫೆಬ್ರವರಿ 26ರಂದೇ ಸಮಾಪ್ತಿಯಾಗಲಿದೆ. ಮಹಾಕುಂಭಮೇಳವು ವಿಸ್ತರಣೆ ಆಗಲಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳನ್ನು ಪ್ರಯಾಗರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರವೀಂದ್ರ ಮಂದರ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

”ಕಾರ್ಯಕ್ರಮದ ವೇಳಾಪಟ್ಟಿಯನ್ನು ಧಾರ್ಮಿಕ ಮುಹೂರ್ತಗಳನ್ನು (ಶುಭ ಸಮಯಗಳು) ಆಧರಿಸಿ ನಿರ್ಧರಿಸಲಾಗುತ್ತದೆ ಹಾಗೂ ಅದರಲ್ಲಿ ಯಾವುದೇ ಬದಲಾಣೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಪ್ರಯಾಗರಾಜ್ನಲ್ಲಿ ನಡೆಯುವ ಮಹಾಕುಂಭ ಮೇಳದಲ್ಲಿ ಅನೇಕ ಸ್ಥಳಗಳಲ್ಲಿ ನೀರಿನಲ್ಲಿ ಮಲ ಬ್ಯಾಕ್ಟೀರಿಯಾಗಳಿವೆ. ಈ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂಬ ವರದಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರಾಕರಿಸಿದ್ದಾರೆ.

ಸಂಗಮದ ನೀರು ಸ್ನಾನ ಮಾಡಲು ಮಾತ್ರವಲ್ಲ ಕುಡಿಯಲು ಕೂಡ ಯೋಗ್ಯವಾಗಿದೆ ಎಂದು ಸಿಎಂ ಯೋಗಿ ಹೇಳಿದ್ದಾರೆ. ತ್ರಿವೇಣಿ ಸಂಗಮದಲ್ಲಿನ ನೀರು ಪೌರಾಣಿಕ ಸರಸ್ವತಿಯೊಂದಿಗೆ ಗಂಗಾ ಹಾಗೂ ಯಮುನಾ ನದಿ ಸೇರುವ ಸ್ಥಳ. ಇದು “ಕುಡಿಯಲು ಕೂಡ ಯೋಗ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಕೋಟ್ಯಂತರ ಜನರು ಪವಿತ್ರ ಸ್ನಾನ ಮಾಡಿದ್ದಾರೆ.
ಪ್ರಯಾಗರಾಜಲ್ಲಿ ಗಂಗಾ ಮತ್ತು ಯಮುನಾ ನದಿಗಳಲ್ಲಿ ಸಂಸ್ಕರಿಸದ ಕೊಳಚೆ ನೀರನ್ನು ಬಿಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಈ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ ಮಹಾಕುಂಭ ಮೇಳದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಮಟ್ಟದ ಮಲದ ಬ್ಯಾಕ್ಟೀರಿಯಾ ಮತ್ತು ಒಟ್ಟು ಕೋಲಿಫಾರ್ಮ್ ಕಂಡುಬಂದಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹೇಳಿತ್ತು.

ಉತ್ತರ ಪ್ರದೇಶದ ವಿಧಾನಸಭೆ ಕಲಾಪವನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, “ಸನಾತನ ಧರ್ಮ, ಗಂಗಾ ಮಾತೆ ಮತ್ತು ಭಾರತ”ದ ವಿರುದ್ಧ ತಪ್ಪು ಮಾಹಿತಿ ಹರಡುವ ಜನರನ್ನು ಖಂಡಿಸಿದ್ದಾರೆ.

ವಿಧಾಣಸಭೆಯಲ್ಲಿ ನಾವು ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ 54.25 ಕೋಟಿಗೂ ಹೆಚ್ಚು ಭಕ್ತರು ಈಗಾಗಲೇ ಪ್ರಯಾಗ್ರಾಜ್ನಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದಬುದನ್ನು ಮರೆಯಬಾರದು ಎಂದು ಅವರು ಹೇಳಿದ್ದಾರೆ.

ಸನಾತನ ಧರ್ಮ, ಗಂಗಾ ಮಾತೆ, ಭಾರತ ಅಥವಾ ಮಹಾ ಕುಂಭದ ವಿರುದ್ಧ ಆರೋಪಗಳನ್ನು ಮಾಡುವುದು ಅಥವಾ ನಕಲಿ ವೀಡಿಯೊಗಳನ್ನು ಹರಡುವುದು ಜನರ ನಂಬಿಕೆಯೊಂದಿಗೆ ಆಟವಾಡಿದಂತೆ” ಎಂದು ಆದಿತ್ಯನಾಥ್ ಟೀಕಿಸಿದ್ದಾರೆ.

Related Posts

Leave a Reply

Your email address will not be published. Required fields are marked *