Thursday, September 11, 2025
Menu

ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್‌ ಪ್ರಕಾಶ್‌ ಪಾಟೀಲ್

sharanu prakash patil

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.

ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು.

ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌, ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *