Thursday, January 30, 2025
Menu

ಇನ್ಮುಂದೆ ಅವಿವಾಹಿತ ಜೋಡಿಗಿಲ್ಲ ಓಯೋ ರೂಂ

ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್​ ರೂಮ್​ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. ಮೊದಲಿಗೆ ಮೀರತ್​ನಿಂದ ಈ ಕ್ರಮವನ್ನು ಜಾರಿಗೊಳಿಸಿದೆ.

ಓಯೋ ತನ್ನ ಪರಿಷ್ಕೃತ ನೀತಿಯಡಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್​ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ತಮ್ಮ ಸಂಬಂಧವನ್ನು ತೋರಿಸುವ ಪುರಾವೆಗಳನ್ನು ನೀಡುವುದು ಕಡ್ಡಾಯವಾಗಲಿದೆ. ಸ್ಥಳೀಯ ಸಾಮಾಜಿಕ ಪರಿಸ್ಥಿತಿಗಳನ್ನು ನೋಡಿಕೊಂಡು ಪಾಲುದಾರ ಹೋಟೆಲ್​ಗಳು ಸಂಗಾತಿಗಳಿಗೆ ರೂಮ್ ನೀಡುವ ಅಥವಾ ನೀಡದಿರುವ ಬಗ್ಗೆ ವಿವೇಚನೆಯಿಂದ ನಿರ್ಧರಿಸಬಹುದು ಎಂದು ಕಂಪನಿ ತಿಳಿಸಿದೆ.

ಹೊಸ ನಿಯಮಗಳನ್ನು ತಕ್ಷಣದಿಂದ ಜಾರಿಗೆ ತರುವಂತೆ ಓಯೋ ಮೀರತ್‌ನಲ್ಲಿರುವ ತನ್ನ ಪಾಲುದಾರ ಹೋಟೆಲ್​ಗಳಿಗೆ ನಿರ್ದೇಶನ ನೀಡಿದೆ. ವಾಸ್ತವ ಸ್ಥಿತಿಗತಿಗಳ ಆಧಾರದ ಮೇಲೆ ಕಂಪನಿಯು ಇದನ್ನು ಮತ್ತಷ್ಟು ನಗರಗಳಿಗೆ ವಿಸ್ತರಿಸಲಿದೆ.

ಪೊಲೀಸರು ಮತ್ತು ಹೋಟೆಲ್ ಪಾಲುದಾರರೊಂದಿಗೆ ಸುರಕ್ಷಿತ ಆತಿಥ್ಯ ಕುರಿತು ಸೆಮಿನಾರ್​ ಏರ್ಪಡಿಸುವುದು, ಅನೈತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಹೋಟೆಲ್​ಗಳನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಓಯೋ ಬ್ರ್ಯಾಂಡಿಂಗ್ ಬಳಸುವ ಅನಧಿಕೃತ ಹೋಟೆಲ್​ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ಓಯೋ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯವನ್ನು ಎತ್ತಿಹಿಡಿಯಲು ಓಯೋ ಬದ್ಧವಾಗಿದೆ. ವೈಯಕ್ತಿಕ ಸ್ವಾತಂತ್ರ್ಯವನ್ನು ಗೌರವಿಸುವ ಮಧ್ಯೆ ನಾವು ಕಾರ್ಯನಿರ್ವಹಿಸುವ ಸೂಕ್ಷ್ಮ ಮಾರುಕಟ್ಟೆಗಳಲ್ಲಿ ಕಾನೂನು ಜಾರಿ ಮತ್ತು ನಾಗರಿಕ ಸಮಾಜಗಳ ಬೇಡಿಕೆಗಳನ್ನು ಆಲಿಸುವುದು ಹಾಗೂ ಅವುಗಳನ್ನು ಪರಿಶೀಲಿಸುವುದು ಕೂಡ ನಮ್ಮ ಜವಾಬ್ದಾರಿ. ಹೊಸ ನೀತಿ ಮತ್ತು ಅದರ ಪರಿಣಾಮಗಳನ್ನು ನಿಯಮಿತವಾಗಿ ಪರಿಶೀಲಿಸುತ್ತೇವೆ ಎಂದು ಓಯೋ ಉತ್ತರ ಭಾರತದ ಪ್ರಾದೇಶಿಕ ಮುಖ್ಯಸ್ಥ ಪವಾಸ್ ಶರ್ಮಾ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *