ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಪಿಎಂಎವೈ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಫಲಾನುಭವಿಗಳಿಗೆ ತಲುಪಬೇಕಿದ್ದ ಕೋಟ್ಯಂತರ ರೂಪಾಯಿಗಳನ್ನು ವಸತಿ ಯೋಜನೆ ನೋಡಲ್ ಅಧಿಕಾರಿ ರಾಜೇಶ್ ವಂಚಿಸಿರುವುದಾಗಿ ಸಕಲೇಶಪುರ ತಾ.ಪಂ ಇಒ ಸಕಲೇಶಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಾಲೂಕು ಪಂಚಾಯತ್ ಇಒ ಲಾಗ್ ಇನ್ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ನಡೆಸಿ 60 ಕ್ಕೂ ಹೆಚ್ಚು ಫಲಾನುಭವಿಗಳ ಅನುದಾನವನ್ನು ತನಗೆ ಬೇಕಾದ ಖಾತೆಗಳ ಮೂಲಕ ಹಣ ಲಪಾಟಿಯಿಸಿರುವುದಾಗಿ ಸಕಲೇಶಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗಂಗಾಧರ್ ದೂರು ನೀಡಿದ್ದಾರೆ.
ರಾಜೇಶ್ ವಿರುದ್ಧ ದೂರು ಕೇಳಿಬಂದ ಕೂಡಲೇ ಕರ್ತವ್ಯದಿಂದ ಬಿಡುಗಡೆ ಮಾಡಿದ್ದು, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಮುಂದಾದ ಹಾಸನ ಜಿ.ಪಂ ಸಿಇಒ ಪೂರ್ಣಿಮಾ
ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ.