ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ @siddaramaiah ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ ಆರಂಭವಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಖ್ಯಮಂತ್ರಿ @siddaramaiah ನವರೇ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೂ ಎಷ್ಟು ದಿನ ಬೇಕು ಸ್ವಾಮಿ? ಹೈಕಮಾಂಡ್ ಏಜೆಂಟ್ @kcvenugopalmp
ಆದೇಶಕ್ಕೆ ಕಾಯ್ತಾ ಇದೀರಾ?ಡಿಸಿಎಂ @DKShivakumar ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲಿ ಅಂತಾ wait ಮಾಡ್ತಾ ಇದೀರಾ ಎಂದು ಪ್ರಶ್ನಿಸಿದ್ದಾರೆ.
ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ @siddaramaiah ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ.
ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ ಆರಂಭವಾಗಿಲ್ಲ.
ಮುಖ್ಯಮಂತ್ರಿ… pic.twitter.com/OeVjVou7mx
— R. Ashoka (@RAshokaBJP) December 2, 2025
ರೈತರ ಕಷ್ಟಕ್ಕೆ ಸ್ಪಂದಿಸದ ನಿಮ್ಮಂಥವರಿಗೆ ಯಾಕೆ ಸ್ವಾಮಿ ಅಧಿಕಾರ, ಕುರ್ಚಿ? ಜನ ಈ ನಾಲಾಯಕ್ ಸರ್ಕಾರವನ್ನ ಹಾದಿ ಬೀದಿಯಲ್ಲಿ ಛೀ ಥೂ ಅಂತ ಉಗಿಯುತ್ತಿದ್ದಾರೆ, ಶಾಪ ಹಾಕುತ್ತಿದ್ದಾರೆ. ಅನ್ನದಾತರು ದಿನನಿತ್ಯ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿರುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಅವರ ನೋವಿನ ಶಾಪ ತಟ್ಟದೇ ಇರದ ಎಂದು ಬರೆದುಕೊಂಡಿದ್ದಾರೆ.


