ಬೆಸ್ಕಾಂ ವ್ಯಾಪ್ತಿಯಲ್ಲಿ ಸಂಭವಿಸಿದ ವಿದ್ಯುತ್ ಅವಘಡಗಳಲ್ಲಿ ಕಳೆದ ವರ್ಷ ಆರು ತಿಂಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದ ವರದಿ ತಿಳಿಸಿದೆ.
ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಈ ಸಾವುಗಳು ಸಂಭವಿಸಿವೆ. ಈ ಅವಘಡಗಳಿಗೆ ಸಾರ್ವಜನಿಕರ ನಿರ್ಲಕ್ಷ್ಯವೇ ಕಾರಣ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳನ್ನು ಒಳಗೊಂಡಿರುವ ಬೆಸ್ಕಾಂ ವ್ಯಾಪ್ತಿಯಲ್ಲಿ 2024ರ ಆರು ತಿಂಗಳಲ್ಲಿ (ಏಪ್ರಿಲ್ ನಿಂದ ಅಕ್ಟೋಬರ್) 118 ಸಾವುಗಳು ಸಂಭವಿಸಿವೆ. ಅದೇ ಅವಧಿಯಲ್ಲಿ ವಿದ್ಯುತ್ ಅಪಘಾತಗಳಿಂದಾಗಿ 61 ಪ್ರಾಣಿಗಳು ಮೃತಪಟ್ಟಿವೆ ಎಂದು ಬೆಸ್ಕಾಂ ವರದಿಯಲ್ಲಿ ತಿಳಿಸಿದೆ.
2024-25ರ ಅಂತಿಮ ಅಂಕಿಅಂಶಗಳು ಬಿಡುಗಡೆಯಾಗಬೇಕಿದೆ. ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ 39,024 ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಸಮಸ್ಯೆಗಳನ್ನು ಸರಿಪಡಿಸಲಾಗಿದೆ ಎಂದು ಬೆಸ್ಕಾಂ ಹೇಳಿದೆ 17,463 ಕಡೆಗಳಲ್ಲಿ ಸಮಸ್ಯೆಗಳು ಹಾಗೇಯೇ ಇವೆ. ವಿದ್ಯುತ್ ಮೂಲಸೌಕರ್ಯ ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.