Menu

ಸಿರಗುಪ್ಪದಲ್ಲಿ ಬೈಕ್‌ ರಸ್ತೆ ಗುಂಡಿಗೆ ಬಿದ್ದು ನರ್ಸ್‌ ಬಲಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಾಣಕನೂರು ಕ್ರಾಸ್ ಬಳಿ ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ನರ್ಸ್‌ ಬಲಿಯಾಗಿದ್ದು, ಆಕೆಯ ಪತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳುತ್ತಿದ್ದ ದಂಪತಿ ಬೈಕ್ ಸಮೇತ ರಸ್ತೆ ಗುಂಡಿಗೆ ಬಿದ್ದಿದ್ದು, ಪತ್ನಿ ಸ್ಥಳದಲ್ಲೇ ಅಸು ನೀಗಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿದ್ದ ಮಂಜುಳ (36) ಮೃತಪಟ್ಟವರು. ಪತಿ ಚಂದ್ರಶೇಖರ್ (46) ಅವರಿಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತೆ ನೀಡಲಾಗುತ್ತಿದೆ.

ಈ ದಂಪತಿ ರಾವಿಹಾಳ ಸರ್ಕಾರಿ ಆರೋಗ್ಯ ಕೇಂದ್ರದಲ್ಲೇ ಆರೋಗ್ಯ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ರಾತ್ರಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ರಾಜ್ಯ ಹೆದ್ದಾರಿ 63ರ ಚಾಣಕನೂರು ಕ್ರಾಸ್ ಬಳಿ ರಸ್ತೆ ಕಾಮಗಾರಿಗಾಗಿ ದೊಡ್ಡ ಗುಂಡಿ ತೋಡಲಾಗಿತ್ತು. ಕಾಮಗಾರಿ ನಡೆಸುವವರು ಯಾವುದೇ ಮುನ್ನೆಚ್ಚರಿಕೆ ಫಲಕ ಹಾಕದೇ ಗುಂಡಿಯನ್ನೂ ಮುಚ್ಚದೆ ಬಿಟ್ಟಿದ್ದರು. ಕತ್ತಲಲ್ಲಿ ಈ ಗುಂಡಿ ಕಾಣಿಸದ ಕಾರಣ ಬೈಕ್ ನೇರವಾಗಿ ಗುಂಡಿಗೆ ಬಿದ್ದಿದೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಮಂಜುಳ ಸ್ಥಳದಲ್ಲೇ ಅಸು ನೀಗಿದ್ದಾರೆ.

ಸಂಬಂಧಪಟ್ಟ ಇಲಾಖೆ ಮತ್ತು ಗುತ್ತಿಗೆದಾರರ ಬೇಜವಾಬ್ದಾರಿತನವೇ ಈ ಸಾವಿಗೆ ನೇರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರೈಲು ಹತ್ತಲು ಹೋಗಿ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿಬಿದ್ದು ರೈಲಿನಡಿ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು– ಮೈಸೂರು ಪ್ಯಾಸೆಂಜರ್ ರೈಲು ಚಲಿಸುತ್ತಿದ್ದಾಗ ಈ ದುರಂತ ನಡೆದಿದ್ದು, ಮೃತ ವ್ಯಕ್ತಿ ರಾಮನಗರದ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ತಿಳಿದುಬಂದಿದೆ. ನಿಧಾನಕ್ಕೆ ಚಲಿಸುತ್ತಿದ್ದ ವೇಳೆ ರೈಲು ಹತ್ತಲು ವ್ಯಕ್ತಿ ಯತ್ನಿಸಿದಾಗ ಕಾಲು ಜಾರಿ ಚಕ್ರದಡಿ ಬಿದ್ದಿದ್ದಾರೆ.

Related Posts

Leave a Reply

Your email address will not be published. Required fields are marked *