Menu

ಅಕ್ರಮ ಸಂಬಂಧಕ್ಕೆ ಅಡ್ಡಿ: ಟಾಯ್ಲೆಟ್‌ ಕ್ಲೀನರ್‌ ಇಂಜೆಕ್ಟ್‌ ಮಾಡಿ ಗಂಡನ ಕೊಲೆಗೈದ ಪತ್ನಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ನರ್ಸ್‌ವೊಬ್ಬಳು ಟಾಯ್ಲೆಟ್‌ ಕ್ಲೀನರ್‌ ಇಂಜೆಕ್ಟ್‌ ಮಾಡಿ ಗಂಡನ ಕೊಲೆ ಮಾಡಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ನ್ಯಾಲ್ಕಲ್ ಗ್ರಾಮದಲ್ಲಿ ನಡೆದಿದೆ.

ಪ್ರಶಾಂತ್ (35) ಹತ್ಯೆಯಾದ ಪತಿ. ಪ್ರಶಾಂತ್ ಇತ್ತೀಚೆಗಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದರು. ಪತ್ನಿ ಸಂಧ್ಯಾ ಮತ್ತು ಆಕೆಯ ಪ್ರಿಯಕರ ಅನಿಲ್ ನಡುವಿನ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಪತ್ನಿ ಕೊಲೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.

ಗಂಡನನ್ನು ಟೆರೆಸ್‌ನಿಂದ ತಳ್ಳಿದರೂ ಆತ ಬದುಕುಳಿದಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕ್ಯಾನುಲಾ ಮೂಲಕ ಟಾಯ್ಲೆಟ್ ಕ್ಲೀನರ್ ಹಾಗೂ ಇನ್ನಿತರ ರಾಸಾಯನಿಕಗಳನ್ನು ದೇಹಕ್ಕೆ ಸೇರಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಧ್ಯಾ ವೆಂಕಟ ಸಾಯಿ ಅಲಿಯಾಸ್ ಬಂಟಿಗೆ ಪ್ರಶಾಂತ್ ಜೊತೆ ಸ್ನೇಹ ಬೆಳೆಸಿ ಮದ್ಯಪಾನ ಮಾಡಿಸುವಂತೆ ಹೇಳಿದ್ದಳು. ಜೂನ್ 29ರಂದು ಇಬ್ಬರೂ ಮದ್ಯ ಸೇವಿಸಿದ ಬಳಿಕ ಕಟ್ಟಡದ ಟೆರೆಸ್‌ಗೆ ತೆರಳಿದ್ದರು. ಸಂಧ್ಯಾ ಹಾಗೂ ಬಂಟಿ ಸೇರಿ ಪ್ರಶಾಂತ್‌ನನ್ನು ಟೆರೆಸ್‌ನಿಂದ ಕೆಳಗೆ ತಳ್ಳಿದ್ದಾರೆ. ಗಂಭೀರ ಗಾಯಗೊಂಡಿದ್ದ ಪ್ರಶಾಂತ್‌ನನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆಸೇರಿಸಲಾಗಿತ್ತು.

ನರ್ಸ್ ಸಂಧ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಶಾಂತ್‌ನ ಕ್ಯಾನುಲಾ ಮೂಲಕ ಟಾಯ್ಲೆಟ್ ಕ್ಲೀನರ್ ಹಾಗೂ ಇನ್ನಿತರ ರಾಸಾಯನಿಕಗಳನ್ನು ಇಂಜೆಕ್ಷನ್ ಮಾಡಿದ್ದರಿಂದ ಪ್ರಶಾಂತ್ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಪ್ರಶಾಂತ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಆತನ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ಪ್ರಕರಣದ ಸತ್ಯವನ್ನು ಬಯಲಿಗೆಳೆದಿದ್ದಾರೆ.

ವಿಚಾರಣೆ ವೇಳೆ ವೆಂಕಟ ಸಾಯಿ, ನಮ್ಮಿಬ್ಬರ ನಡುವೆ ಜಗಳ ನಡೆಯಿತು. ನಂತರ ಸಂಧ್ಯಾ ಅಲ್ಲಿಗೆ ಬಂದಳು. ಇಬ್ಬರೂ ಸೇರಿ ಅವನನ್ನು ಟೆರೆಸ್‌ನಿಂದ ತಳ್ಳಿದ್ದೇವೆ. ಇದು ಸಂಧ್ಯಾಳ ಯೋಜನೆಯಾಗಿತ್ತು. ಆಕೆಯೇ ಹಣ ನೀಡಿದ್ದಳು ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸಂಧ್ಯಾ, ಪ್ರಿಯಕರ ಅನಿಲ್ ಹಾಗೂ ವೆಂಕಟ ಸಾಯಿಯನ್ನು ಬಂಧಿಸಿತನಿಖೆ ಮುಂದುವರಿಸಿದ್ದಾರೆ.

 

ಪಿಡಿಒ ಕಿರುಕುಳಕ್ಕೆ ಬೇಸತ್ತು ಡೆತ್‌ ನೋಟ್‌ ಬರೆದಿಟ್ಟು ಬಿಲ್‌ ಕಲೆಕ್ಟರ್‌ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಾವಣಗೆರೆ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ.

ಬಿಳಚೋಡು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಶಿವಪ್ಪ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡವರು. ಬಿಳಚೋಡು ಪಿಡಿಒ ನಂದಲಿಂಗೇಶ್ ವಿರುದ್ಧ ಗಂಭೀರ ಆರೋಪ ಮಾಡಿರುವ ಶಿವಪ್ಪ, ಎರಡು ವರ್ಷಗಳಿಂದ ಪಿಡಿಒ ಕಿರುಕುಳ ನೀಡುತ್ತಿದ್ದು, ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಟಾರ್ಗೆಟ್ ನೀಡುವ ಜೊತೆಗೆ ಉದ್ರಿ ಕಂದಾಯ ವಸೂಲಿ ಮಾಡುವಂತೆ ಹಿಂಸೆ ನೀಡುತ್ತಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ.

ಶಿವಪ್ಪ ಪುತ್ರ ಅಶೋಕ್ ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪಿಡಿಒ ನಂದಲಿಂಗೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಕಂಪ್ಯೂಟರ್ ಜ್ಞಾನ ಇಲ್ಲದ ಹಿನ್ನೆಲೆ ಪಿಡಿಒ ನಂದಲಿಂಗೇಶ್ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು, ಜಾತಿ ನಿಂದನೆ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Related Posts

Leave a Reply

Your email address will not be published. Required fields are marked *