Menu

ಪಾವಗಡದಲ್ಲಿ ಇಲಾಖೆ ಜಂಟಿ ನಿರ್ದೇಶಕನ ಕಿರುಕುಳ ಆರೋಪ: ಅಧಿಕಾರಿ ಆತ್ಮಹತ್ಯೆ

ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ  ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದು, ಸಂಬಂಧಿಸಿದ ವೀಡಿಯೊ ಸಹೋದ್ಯೋಗಿಗಳಿಗೆ ಕಳಿಸಿದ್ದು ವೈರಲ್‌ ಆಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಮಾಡಿದ್ದಾಗಿ ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ.  ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ. ನಮ್ಮ ಕುಟುಂಬದವರು ಸೇಡು ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದೂ ಹೇಳಿದ್ದಾರೆ.

ಮಲ್ಲಿಕಾರ್ಜುನ ಪಾವಗಡ ತಾಲೂಕಿನವರಾಗಿದ್ದು ಕಳೆದ ಮೂರು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವೇ ದಿನಗಳಲ್ಲಿ ಅವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು. ಆದರೆ ಜಂಟಿ ನಿರ್ದೇಶಕರ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಂಜೆ ಕಚೇರಿಯ ಎಲ್ಲಾ ಸಿಬ್ಬಂದಿ ತೆರಳಿದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೆ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ಹಾಗೂ ಹಣಕಾಸು ಸಂಬಂಧಿತ ವಿಚಾರಗಳನ್ನೂ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ವಶಪಡಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *