ಪ್ರಯಾಗ್ರಾಜ್ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದು, ರಾಜ್ಯದ ಹಲವಾರು ಕನ್ನಡಿಗರು ಸಿಲುಕಿರುವ ಭೀತಿ ಉಂಟಾಗಿದೆ.
ಕಾಲ್ತುಳಿತ ಘಟನೆಗೆ ಆಘಾತ ವ್ಯಕ್ತಪಡಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಅವರು ಸೂಚನೆ ನೀಡಿದ್ದಾರೆ.
ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು…
— CM of Karnataka (@CMofKarnataka) January 29, 2025