ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಶಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಈ ದುರಂತ ನಡೆದಿದೆ.
ನೆಲಮಂಗಲ, ಪೀಣ್ಯ ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು, ಕ್ಷಣಕ್ಷಣಕ್ಕೂ ಬೆಂಕಿ ಇನ್ನಷ್ಟು ವ್ಯಾಪಿಸುತ್ತಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಕ್ಕಪಕ್ಕದ ಗೋದಾಮು ಹಾಗೂ ಮನೆಗೆ ಬೆಂಕಿ ತಗುಲುವ ಆತಂಕ ಎದುರಾಗಿದೆ. ಅಂದಾಜು 30 ಕೋಟಿ ರೂಪಾಯಿ ಮೌಲ್ಯದ ಆಯಿಲ್ ಬೆಂಕಿಗಾಹುತಿ ಆಗಿದೆ ಎಂದು ಹೇಳಲಾಗುತ್ತಿದೆ.
ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭದ ಹಿನ್ನೆಲೆ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು. ಬೆಂಕಿ ಅವಘಡದಿಂದ ಆಯಿಲ್ ನಷ್ಟವಾಗಿದೆ. ಕಂದಾಯ ಮಾಜಿ ಸಚಿವ ಹೆಚ್.ಸಿ.ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪ ಎಂಬವರಿಗೆ ಸೇರಿದ ಗೋದಾಮು ಇದಾಗಿದ್ದು, ಶಲ್ ಕಂಪನಿಗೆ ಬಾಡಿಗೆಗೆ ನೀಡಲಾಗಿತ್ತು.