Menu

ಅಪಘಾತದಲ್ಲಿ  ಮನು ಭಾಕರ್  ಅಜ್ಜಿ, ಚಿಕ್ಕಪ್ಪ ಸಾವು

ಹರಿಯಾಣಾದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್‌ಗೆ  ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಮೃತರಾಗಿದ್ದಾರೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಮೃತಪಟ್ಟವರು.

ಯುಧವೀರ್ ಸಿಂಗ್ ಸ್ಕೂಟಿಯಲ್ಲಿ ಕರ್ತವ್ಯಕ್ಕೆ ತೆರಳಿದ್ದರು. ಅಜ್ಜಿ ಸಾವಿತ್ರಿ ದೇವಿಯು ಲೋಹರು ಚೌಕ್‌ನಲ್ಲಿರುವ ಕಿರಿಯ ಮಗನ ಮನೆಗೆ ಹೋಗಬೇಕಾಗಿತ್ತು. ಹೀಗಾಗಿ ಅವರು ಸಹ ಜೊತೆಗೆ ತೆರಳಿದ್ದರು. ಇಬ್ಬರೂ ಕಲಿಯಾಣ ತಿರುವಿನಲ್ಲಿ ಬರುವಷ್ಟರಲ್ಲಿ ಎದುರಿನಿಂದ ಕಾರು ರಾಂಗ್ ಸೈಡ್ ನಿಂದ ಬಂದಿದ್ದರಿಂದ ಏನೂ ಮಾಡಲು ಸಾಧ್ಯವಾಗಿರಲಿಲ್ಲ. ಕಾರು ಬಂದು ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದರು.  ಎರಡು ದಿನಗಳ ಹಿಂದೆ ಮನು ಭಾಕರ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು.

ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮನೆ ಮಹೇಂದ್ರಗಢದ ಬೈಪಾಸ್ ಪ್ರದೇಶದಲ್ಲಿದೆ.
ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ  ಎರಡು ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಅವರು ಒಲಿಂಪಿಕ್ಸ್‌ನಲ್ಲಿ ಈ ಪ್ರದರ್ಶನ ನೀಡಿದ ಮೊದಲ ಭಾರತೀಯ ಕ್ರೀಡಾಪಟು ಎಂಬುದು ಹೆಗ್ಗಳಿಕೆ.

Related Posts

Leave a Reply

Your email address will not be published. Required fields are marked *