ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ನೇರವೇರಿಸಲಾಯಿತು. ನಾನಾ ಕಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಹಾಗೂ ಹಲವು ಗಣ್ಯರು ನಾಡದೇವತೆಯ ದರ್ಶನ ಪಡೆದು ಪುನೀತರಾದರು.
ಮಂಜಿನ ಹೊದಿಕೆ, ತಣ್ಙನೆಯ ಗಾಳಿ, ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೆ ರಾಜ್ಯದ ಮೂಲೆ ಮೂಲೆಯಿಂದ ಬೆಟ್ಟಕ್ಕೆ ಆಗಮಿಸಿದ್ದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಜಯಘೋಷ ಕೂಗುತ್ತ ಚಾಮುಂಡೇಶ್ವರಿ ದರ್ಶನ ಪಡೆದರು. ಸಾರ್ವಜನಿಕರ ವಾಹನಕ್ಕೆ ನಿರ್ಬಂಧ ವಿದಿಸಿದ್ದರಿಂದ ಲಲಿತ ಮಹಲ್ ಬಳಿಯಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಎರಡು ಡೋಸ್ ಲಸಿಕೆ ಪಡೆದಿರುವುದನ್ನು ಪರಿಶೀಲಿಸಿ ನಂತರ ಬಿಡಲಾಗುತ್ತಿತ್ತು. ವಾಹನದಲ್ಲಿ ಬರುವವರಿಗೂ ಪರಿಶೀಲಿಸಿದ ಬಳಿಕವೇ ಬಿಡಲಾಯಿತು. ಸಾವಿರಾರು ಮಂದಿ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಬಂದು ಭಕ್ತಿಭಾವ ಮೆರೆದರು. ಮೊದಲ ವಾರಕ್ಕಿಂತ ಎರಡನೇ ವಾರ ಹೆಚ್ಚಿನ ಭಕ್ತರು ಆಗಮಿಸಿದ್ದರು.
ಮುಂಜಾನೆಯಿಂದಲೇ ಪೂಜೆ: ಎರಡನೇ ಆಶಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮುಂಜಾನೆ ೪ ಗಂಟೆಯಿಂದಲೇ ಬೆಟ್ಟದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡವು. ಪ್ರತಿ ವಾರದಂತೆ ಮೊದಲಿಗೆ ದೇವಿಗೆ ಅಭಿಷೇಕ, ರುದ್ರಾಭೀಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ನಂತರ ಬೆಳಗ್ಗೆ ೧೧ ಗಂಟೆಗೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ನಾಗಲಕ್ಷ್ಮಿ ವಿಶೇಷ ಅಲಂಕಾರ: ಆಷಾಢ ಮಾಸದ ಪ್ರತಿ ಶುಕ್ರವಾರಗಳಲ್ಲೂ ಚಾಮುಂಡೇಶ್ವರಿಗೆ ವಿವಿಧ ರೀತಿಯ ಅಲಂಕಾರಗಳನ್ನು ಮಾಡಲಿದ್ದು, ಈ ವಾರ ದೇವಿಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ನೀಲಿ ಬಣ್ಣದ ಸೀರೆಯನ್ನುಟ್ಟು, ವಿವಿಧ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿ