Monday, September 01, 2025
Menu

ಓಣಂ: ಬೆಂಗಳೂರಿನಿಂದ ಕೇರಳಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಓಣಂ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರು-ಕೇರಳ ಮಧ್ಯೆ ಕೆಎಸ್‌ಆರ್‌ಟಿಸಿಯಿಂದ 90 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ಮೈಸೂರು ರಸ್ತೆ ಮತ್ತು ಶಾಂತಿನಗರ ಬಸ್ ನಿಲ್ದಾಣ ಸೇರಿದಂತೆ ಬೆಂಗಳೂರಿನ ಪ್ರಮುಖ ಟರ್ಮಿನಲ್‌ಗಳಿಂದ ಹೊರಡಲಿವೆ. ಹಬ್ಬದ ಮುಗಿದು ಹಿಂತಿರುಗುವವರೆಗೂ ಈ ಹೆಚ್ಚುವರಿ ಬಸ್ ಸೇವೆ ಲಭ್ಯವಿರುತ್ತದೆ.

ಸೆಪ್ಟೆಂಬರ್ 2 ರಿಂದ 4 ರವರೆಗೆ ಓಣಂಗಾಗಿ ಕೇರಳದ ಊರುಗಳಿಗೆ ತೆರಳುವ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಈ ಕ್ರಮ ಕೈಗೊಂಡಿರುವುದಾಗಿ ಕೆಎಸ್​ಆರ್​ಟಿಸಿ ತಿಳಿಸಿದೆ. ಸೆಪ್ಟೆಂಬರ್ 5 ರಂದು ಓಣಂ ಆಚರಿಸಲಾಗುತ್ತದೆ.

ಕೆಎಸ್​ಆರ್​ಟಿಸಿ ಹೆಚ್ಚುವರಿ ವಿಶೇಷ ಬಸ್‌ಗಳು ಬೆಂಗಳೂರಿನಿಂದ ಕೇರಳದ ಕಣ್ಣೂರು, ಕೋಝಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ ಮತ್ತು ತಿರುವನಂತಪುರಂ ನಗರಗಳಿಗೆ ಸಂಚರಿಸಲಿವೆ.

ಸೆಪ್ಟೆಂಬರ್ 7 ರಂದು ಕೇರಳದ ನಗರಗಳಿಂದ ಬೆಂಗಳೂರಿಗೆ ಹಿಂತಿರುಗಲು ವಿಶೇಷ ಬಸ್‌ಗಳು ಲಭ್ಯವಿರಲಿವೆ. ಹೆಚ್ಚಿನ ಬೇಡಿಕೆಯಿರುವುದರಿಂದ ಜನ ಮುಂಚಿತವಾಗಿ ಟಿಕೆಟ್‌ಗಳನ್ನು ಕಾಯ್ದಿರಿಸುವುದು ಉತ್ತಮ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *