ಬೆಂಗಳೂರು ಕೆಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ದುರಂತ ನಡೆದ ಮನೆಯೊಳಗೆ ತಾಯಿ-ಮಗು ಸಿಲುಕಿದ್ದಾರೆಂದು ಹೇಳಲಾಗಿದೆ.
ರಾಜಸ್ಥಾನ ಮೂಲದ ಮದನ್ ಸಿಂಗ್ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ವ್ಯಕ್ತಿ. ವಾಣಿಜ್ಯ ಕಟ್ಟಡದ 3ನೇ ಅಂತಸ್ತಿನಲ್ಲಿದ್ದ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಒಂದೇ ಕುಟುಂಬದ ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಟ್ಟು ನಾಲ್ವರು ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಪತಿ, ಪತ್ನಿ ಹಾಗೂ 8 ಮತ್ತು 5 ವರ್ಷದ ಇಬ್ಬರು ಮಕ್ಕಳಿದ್ದರು.
ವಿಷಯ ತಿಳಿಯುತ್ತಿದ್ದಂತೆಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಮೂರು ಅಂಬುಲೆನ್ಸ್‌ಗಳನ್ನ ನಿಯೋಜಿಸಲಾಗಿದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ಕಾರಣ ರಕ್ಷಣಾ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.