Menu

Covid: ಬೆಳಗಾವಿಯಲ್ಲಿ ಕೊರೋನಗೆ ವ್ಯಕ್ತಿ ಬಲಿ

ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತಪಾಸಣೆಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು.

ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ರೋಗಿಯು ಚಿಕಿತ್ಸೆ ಫಲಿಸದೆ ತಡ ರಾತ್ರಿ ಮೃತಪಟ್ಟಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ದಾಖಲಾಗಿದ್ದ ಅವರಲ್ಲಿ ಕೊರೋನ ಪಾಸಿಟಿವ್‌ ಪತ್ತೆಯಾದ ಹಿನ್ನೆಲೆಯಲ್ಲಿ ಕೋವಿಡ್‌ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿತ್ತು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರವು ಆಸ್ಪತ್ರೆಗಳಲ್ಲಿ ಸಕಲ ವ್ಯವಸ್ಥೆಗಳನ್ನು ಸನ್ನದ್ಧಗೊಳಿಸುವಂತೆ ಆರೋಗ್ಯ ಇಲಾಖೆ ಮತ್ತು ಅಧಿಕಾರಿಗಳಿಗೆ ಸೂಚಿಸಿದೆ. ಆತಂಕ ಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯ ಎಂದು ತಿಳಿಸಿದೆ.

Related Posts

Leave a Reply

Your email address will not be published. Required fields are marked *