Menu

ಈರುಳ್ಳಿ,ಬೆಳ್ಳುಳ್ಳಿ ಶುಂಠಿ ಮಾರುಕಟ್ಟೆ: ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ

shivananda patil

ಬೆಂಗಳೂರು:ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ವಿಧಾನಪರಿಷತ್ತಿಗೆ ಮಂಗಳವಾರ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು ಕೆಲವು ವರ್ತಕರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಸರ್ಕಾರ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ವರ್ತಕರಿಗೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮಳಿಗೆ ಹಂಚಿಕೆ ಮಾಡಲಿದೆ ಎಂದು ತಿಳಿಸಿದರು.

ಯಶವಂತಪುರ ಎಪಿಎಂಸಿಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಹಾಗೂ ರೈತರ ಹಿತದೃಷ್ಟಿಯಿಂದ ದಾಸನಪುರದಲ್ಲಿ 67.25 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಈ ಪ್ರದೇಶದಲ್ಲಿ ರೂ 306.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗಿದೆ.

ಎಪಿಎಂಸಿಗಳನ್ನು ಹೊರತುಪಡಿಸಿ ರೈತರು ತಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕಾಯ್ದೆ ಅಡಿ ವಿವಿಧ ಅವಕಾಶ ಕಲ್ಪಿಸಿ 4 ಖಾಸಗಿ ಮಾರುಕಟ್ಟೆ ಹಾಘೂ 65 ನೇರ ಖರೀದಿ ಕೇಂದ್ರಗಳನ್ನು ನಡೆಸಲು ಲೈಸೆನ್‌್ಸ ನೀಡಲಾಗಿದೆ ಎಂದರು.

410 ಉಪ ಮಾರುಕಟ್ಟೆ:

ಸದಸ್ಯ ನಾಗರಾಜ್ ಅವರ ಮತ್ತೊಂದು ಪ್ರಶ್ನೆಗೆ ರಾಜ್ಯದಲ್ಲಿ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು, 171 ಮುಖ್ಯ ಮಾರುಕಟ್ಟೆಗಳು ಹಾಗೂ 410 ಉಪ ಮಾರುಕಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ, 1966ರ ಕಲಂ 4ರ ಪರಂತುಕದನ್ವಯ ಒಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಕ್ಷೇತ್ರವನ್ನು ಒಂದು ತಾಲ್ಲೂಕು ಪ್ರದೇಶಕ್ಕಿಂತ ಕಡಿಮೆ ಇರದಂತೆ ಹಾಗೂ ಒಂದು ಜಿಲ್ಲಾ • ಪ್ರದೇಶಕ್ಕಿಂತ ಹೆಚ್ಚಾಗಿರದಂತೆ ನಿಗದಿಪಡಿಸಲು ಅವಕಾಶ ಕಲ್ಪಿಸಿದೆ ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಪ್ರದೇಶವನ್ನು 5 ಮಾರಾಟ ನಿಯಂತ್ರಣ ಕಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು.

ಕೃಷಿ ಮಾರುಕಟ್ಟೆ ಜಾಲ:

ಹಿಂದೆ ರಾಜ್ಯದಲ್ಲಿ ಒಟ್ಟು 167 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಸ್ಥಾಪಿಸಲಾಗಿದ್ದು, ಹೊಸದಾಗಿ ತಾಲ್ಲೂಕು ರಚನೆಗಳ ನಂತರ ಅವಶ್ಯಕತೆ ಗನುಗುಣವಾಗಿ ಹೊಸದಾಗಿ 4 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿ ಒಟ್ಟಾರೆ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯನಿರ್ವಹಿಸುತ್ತಿವೆ ಮತ್ತು ಕರ್ನಾಟಕ ರಾಜ್ಯದಲ್ಲಿ ಅಭಿವೃದ್ಧಿ ಹೊಂದಿದ ಕೃಷಿ ಮಾರುಕಟ್ಟೆ ಜಾಲ ಇರುತ್ತದೆ ಎಂದು ಹೇಳಿದರು.

ಸ್ವತಂತ್ರ ಮಾರುಕಟ್ಟೆ ಸಮಿತಿ ಸ್ಥಾಪನೆ ಬಗ್ಗೆ ಬರುವ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಆರ್ಥಿಕ ಸಮೀಕ್ಷೆ ಕೈಗೊಂಡು ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಹೊರತುಪಡಿಸಿ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿವಿಧ ಆಯ್ಕೆಗಳನ್ನು ಕಾಯ್ದೆಯಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರ ಮೇರೆಗೆ 4 ಖಾಸಗಿ ಮಾರುಕಟ್ಟೆಗಳು, 65 ನೇರ ಖರೀದಿ ಕೇಂದ್ರಗಳನ್ನು ನಡೆಸಲು ಲೈಸೆನ್ ನೀಡಲಾಗಿದೆ ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *