ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಕೆಆರ್‌ಎಸ್ ಡ್ಯಾಂಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.ಅಣೆಕಟ್ಟೆ ಭರ್ತಿಯಾಗಲು ಇನ್ನು 9 ಅಡಿಯಷ್ಟೇ ಬಾಕಿ ಇದೆ. 34,092 ಕ್ಯೂಸೆಕ್ ಒಳಹರಿವು ಇದ್ದು, 1,148 ಕ್ಯೂಸೆಕ್ ನೀರು ಹೊರ ಹರಿವು ಇದೆ.
ಕೆಆರ್‌ಎಸ್ ನೀರಿನ ಮಟ್ಟ 115 ಅಡಿಗೆ ಏರಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 115.78 ಅಡಿ ನೀರು ಭರ್ತಿಯಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 37.947 ಟಿಎಂಸಿ ನೀರು ಸಂಗ್ರಹವಿದೆ.
ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ: ಗರಿಷ್ಠ ಮಟ್ಟ – 124.80 ಅಡಿ, ಇಂದಿನ ಮಟ್ಟ – 115.78 ಅಡಿ, ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ, ಇಂದಿನ ಸಾಮರ್ಥ್ಯ – 37.947 ಟಿಎಂಸಿ, ಒಳ ಹರಿವು – 34,092 ಕ್ಯೂಸೆಕ್, ಹೊರ ಹರಿವು – 1,148 ಕ್ಯೂಸೆಕ್.