Saturday, October 17, 2026
Menu

ಧಾರವಾಡದಲ್ಲಿ ಅನಸ್ತೇಶಿಯಾ ತಜ್ಞನ ಕೊಲೆಗೈದ ನೇತ್ರ ವೈದ್ಯೆ ಪತ್ನಿ

ಧಾರವಾಡದ ಅಪಾರ್ಟ್‌ಮೆಂಟ್‌ನಲ್ಲಿ ಚಿರಾಯು ಆಸ್ಪತ್ರೆಯ ಅನಸ್ತೇಷಿಯಾ ತಜ್ಞ ಡಾ. ಕಿರಣ್ ಅವರನ್ನು ಕೊಲೆ ಮಾಡಲಾಗಿದ್ದು, ನೇತ್ರ ವೈದ್ಯೆಯಾಗಿರುವ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಆತನ ಸ್ಥತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಡಾ.ಕಿರಣ್ ಅವರನ್ನು ಪತ್ನಿ ಪ್ರಿಯಾ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ಡಾ.ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿರುವ ಅನುಮಾನ ವ್ಯಕ್ತವಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಸಂಬಂಧಿಕರು ಫೋನ್ ಮಾಡಿದಾಗ ಪತಿ ರೆಸ್ಟ್ ಮಾಡುತ್ತಿದ್ದಾರೆ ಎಂದು ಪತ್ನಿ ಪ್ರಿಯಾ ಹೇಳಿದ್ದಾರೆ. ಸಂಜೆಯವರೆಗೂ ಫೋನ್ ಸ್ವೀಕರಿಸದೆ ಇದ್ದಾಗ ಅನುಮಾನದಿಂದ ಸಂಬಂಧಿಕರು ಮನೆಗೆ ಬಂದು ನೋಡಿದ್ದಾರೆ, ಆಗ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಮಗನಿಗೆ ಜೀವ ಇದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಾರ್ಟ್​​ಮೆಂಟ್​​ಗೆ ಬಿಗಿ ಭದ್ರತೆ ಇರುವ ಕಾರಣ ಬೇರೆಯವರು ಬಂದು ಕೊಲೆ ಮಾಡುವುದು ಸಾಧ್ಯವಿಲ್ಲ. ಘಟನೆಗೆ ಕಾರಣ ಏನು ಎಂಬುದು ತನಿಖೆ ಬಳಿಕ ಹೊರ ಬರಬೇಕಿದೆ. ಪ್ರಿಯಾ ಆಘಾತದಲ್ಲಿದ್ದು, ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *