Menu

ವಿರೋಧ ಪಕ್ಷದವರು ಅಧ್ಯಯನ ಮಾಡದೆ ಬಜೆಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ: ಸಿಎಂ

ವಿರೋಧಪಕ್ಷದ ನಾಯಕರು ಆಯವ್ಯಯದ ಬಗ್ಗೆ ಸ್ಥೂಲವಾಗಿ ಅಧ್ಯಯನ ಮಾಡದೇ, ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ಆಳವಾದ ಅಧ್ಯಯನ ನಡೆಸಿಲ್ಲ ಎಂದು ಕಂಡುಬರುತ್ತದೆ. ವಿರೋಧಪಕ್ಷದವರು ಬಜೆಟ್ ನ್ನು ಎಷ್ಟೇ ಟೀಕಿಸಿದರೂ, ಮಾವಿನ ಹಣ್ಣು ಬೇವಿನ ಹಣ್ಣು ಆಗಲು ಸಾಧ್ಯವಿಲ್ಲ.ಬಜೆಟ್ ಖಾಲಿ ಚೊಂಬು ಎಂಬ ಟೀಕಿಸಲಾಗಿದೆ. ಆದರೆ ಕರ್ನಾಟಕಕ್ಕೆ ಖಾಲಿ ಚೊಂಬು ನೀಡದೇ, ತುಂಬಿದ ಚೊಂಬನ್ನೇ ನೀಡಲಾಗಿದೆ. ನಮ್ಮ ಬಜೆಟ್ ತುಂಬಿದ ಕೊಡ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ  ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರದಲ್ಲಿ ಹಲವು ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿದರು.  21 ಜನ ವಿರೋಧಪಕ್ಷದವರು ,ಆಡಳಿತ ಪಕ್ಷದವರು ಜೆಡಿಎಸ್ ಹಾಗೂ ಉಳಿದವರು ಸೇರಿದಂತೆ ಒಟ್ಟು 50 ಜನ ಮಾತನಾಡಿದ್ದು,ಒಟ್ಟು 24 ಗಂಟೆ 45 ನಿಮಿಷ ಚರ್ಚೆ ನಡೆಸಲಾಗಿದೆ. ನಾನು 17 ಬಜೆಟ್ ಗಳನ್ನು ಮಂಡಿಸಿದ್ದು , ಬಜೆಟ್ ಮೇಲೆ 50 ಜನ ಮಾತನಾಡಿದ್ದು, ಇದೇ ಮೊದಲು. ಚರ್ಚೆಯಲ್ಲಿ ಭಾಗವಹಿಸಿ, ಬಜೆಟ್ ನ್ನು ಟೀಕೆ, ಸ್ವಾಗತ, ವಿಮರ್ಶೆ ಮಾಡಿದ ಎಲ್ಲರಿಗೂ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ವಿರೋಧಪಕ್ಷದವರು ಸೋಷಿಯಲ್ ಮೀಡಿಯಾಕ್ಕೆ ಹೂರಣ ನೀಡಲು ಬಹಳ ಕಸರತ್ತು ಮಾಡಿ ಪದಪುಂಜಗಳನ್ನು ಬಳಸಿದ್ದಾರೆ. ವಿರೋಧಪಕ್ಷದ ನಾಯಕರು ಆಯವ್ಯಯದ ಬಗ್ಗೆ ಸ್ಥೂಲವಾಗಿ ಅಧ್ಯಯನ ಮಾಡದೇ, ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ಆಳವಾದ ಅಧ್ಯಯನ ನಡೆಸಿಲ್ಲ ಎಂದು ಕಂಡುಬರುತ್ತದೆ. ವಿರೋಧಪಕ್ಷದವರು ಬಜೆಟ್ ನ್ನು ಎಷ್ಟೇ ಟೀಕಿಸಿದರೂ, ಮಾವಿನ ಹಣ್ಣು ಬೇವಿನ ಹಣ್ಣು ಆಗಲು ಸಾಧ್ಯವಿಲ್ಲ.ಬಜೆಟ್ ಖಾಲಿ ಚೊಂಬು ಎಂಬ ಟೀಕಿಸಲಾಗಿದೆ. ಆದರೆ ಕರ್ನಾಟಕಕ್ಕೆ ಖಾಲಿ ಚೊಂಬು ನೀಡದೇ, ತುಂಬಿದ ಚೊಂಬನ್ನೇ ನೀಡಲಾಗಿದೆ. ನಮ್ಮ ಬಜೆಟ್ ತುಂಬಿದ ಕೊಡ ಎಂದು ಹೇಳಿದ್ದಾರೆ.

ಪ್ರಮುಖ ದಿನಪತ್ರಿಕೆಗಳ ಸಂಪಾದಕೀಯಗಳಲ್ಲಿ ಹಾಗೂ ಆರ್ಥಿಕ ತಜ್ಞರು, ಎಲ್ಲ ಸಮುದಾಯಗಳನ್ನು ತಲುಪಿದ ಬಜೆಟ್, ರಾಜ್ಯದ ಸುಸ್ಥಿರ ಮತ್ತು ಸಶಕ್ತ 11 ಜಿ ಮಾದರಿಯ ಬಜೆಟ್,ನೀರಾವರಿ ಮತ್ತು ಮೂಲಸೌಕರ್ಯಕ್ಕೆ ಒತ್ತು, ಜನಪ್ರಿಯತೆ ಮತ್ತು ವಾಸ್ತವದ ಬಜೆಟ್ , ರಾಜ್ಯದ ಬೊಕ್ಕಸವನ್ನು ಸುಸ್ಥಿರವಾಗಿಡುವ ದೂರದೃಷ್ಟಿಯ ಬಜೆಟ್, ನಿರುದ್ಯೋಗ ನಿವಾರಣೆ, ಸಾಮಾಜಿಕ ಭದ್ರತೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯದ ಮೇಲೆ ಕೇಂದ್ರಿತ ಹಾಗೂ ಎಲ್ಲರನ್ನೊಳಗೊಂಡ ಬಜೆಟ್, ಹೂಡಿಕೆಗಳಿಗೆ ಹಾಗೂ ನವೋದ್ಯಮಿಗಳಿಗೆ ನೆರವಾಗುವ ಯೋಜನೆಗಳ ಬಜೆಟ್ ಎಂಬ ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ ಎಂದು ಸಿಎಂ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *