Thursday, January 30, 2025
Menu

ಮೈಕ್ರೊ ಫೈನಾನ್ಸ್ ಹಾವಳಿ ಕಡಿವಾಣಕ್ಕೆ ಸುಗ್ರಿವಾಜ್ಞೆ: ರಾಜ್ಯ ಸಚಿವ ಸಂಪುಟ ಅನಮೋದನೆ

vidanasouda

ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳತಕ್ಕೆ ಕಡಿವಾಣ ಹಾಕಲು ಸುಗ್ರಿವಾಜ್ಞೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ಕಡಿವಾಣ ಹಾಕಲು ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.

ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಸಂಪುಟ ಸಭೆಯ ತೀರ್ಮಾನಗಳನ್ನು ವಿವರಿಸಿದ್ದು, ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು.

ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸಂಜೆ 4 ಗಂಟೆಗೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ ಎಂದು ತಿಳಿಸಿದರು.

ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ. ಸಂಪುಟ ಸಭೆಯಲ್ಲಿ ಸಂಪೂರ್ಣ ಅಧಿಕಾರ ಸಿಎಂ ಅವರಿಗೆ ನೀಡಲಾಗಿದೆ. ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ. ಕೆಲವು ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ ಎಂದು ಎಚ್ ಕೆ ಪಾಟೀಲ್ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *