Menu

ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಹತ್ಯೆ ಆರೋಪಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ಶಿಗ್ಗಾಂವಿಯಲ್ಲಿ ಗುತ್ತಿಗೆದಾರನನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಎ-1 ಆರೋಪಿ ನಾಗರಾಜ್ ಸವದತ್ತಿ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಮನೆ ಸಂಪೂರ್ಣ ಹಾನಿಗೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೆ ಇದ್ದಾಗ ಈ ಘಟನೆ ನಡೆದಿದೆ.

ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎಂಬವರನ್ನು ಮಂಗಳವಾರ ಹಾಡಹಗಲೇ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಹತ್ಯೆಗೆ ಆರೋಪಿ ನಾಗರಾಜ್ ಸಂಚು ರೂಪಿಸಿದ್ದ ಎನ್ನಲಾಗಿದೆ. ಸ್ಥಳೀಯರು ಕೃತ್ಯದ ವೀಡಿಯೊ ಮಾಡಿದ್ದರು. ವೀಡಿಯೊ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ವೀಡಿಯೊದಲ್ಲಿ ನಾಗರಾಜ್ ಸವದತ್ತಿ, ಹನುಮಂತ, ಅಶ್ರಪ್, ಸುದೀಪ್ ಮತ್ತು ಸುರೇಶ್ ಹತ್ಯೆ ಮಾಡಿರುವುದು ಸೆರೆಯಾಗಿತ್ತು. ಹತ್ಯೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆಸ್ತಿ ವಿಚಾರದಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಈ ಐವರ ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Related Posts

Leave a Reply

Your email address will not be published. Required fields are marked *