ಮ್ಯಾನ್ಮರ್ ಮತ್ತು ಥಾಯ್ಲೆಂಡ್ ನಲ್ಲಿ ಸಂಭವಿಸಿದ ಭೀಕರ ಭೂಕಂಪನಕ್ಕೆ ಬಲಿಯಾದವರ ಸಂಖ್ಯೆ 1000 ದಾಟಿದ್ದು, 2500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಸಂಭವಿಸಿದ 2 ಬಾರಿಯ ಭೂಕಂಪನದಲ್ಲಿ ಮೊದಲ ಬಾರಿ ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆ ಹಾಗೂ ನಂತರ 6.8ರ ತೀವ್ರತೆ ದಾಖಲಾಗಿತ್ತು.
ಹಲವು ಕಟ್ಟಡಗಳು ಧರೆಗುರುಳಿದ್ದು, ಎರಡೂ ದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮೃತರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದ್ದು, 2000ಕ್ಕೆ ಏರುವ ಸಾಧ್ಯತೆ ಇದೆ ಎಂದು ಭೀತಿ ವ್ಯಕ್ತಪಡಿಸಲಾಗಿದೆ.
ಮ್ಯಾನ್ಮರ್ ನಲ್ಲಿ ಪ್ರಸ್ತುತ ಧಂಗೆ ಉಂಟಾಗಿದ್ದು, ಹಲವು ಪ್ರಮುಖ ತುರ್ತು ಸೇವೆಗಳು ಬಲ ಕಳೆದುಕೊಂಡಿವೆ. ಇಂತಹ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.