ಪದ್ಮಶ್ರೀ ಪುರಸ್ಕೃತೆ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ 1911 ಜೂನ್ 30ರಂದು ಜನಿಸಿದ್ದ ತಿಮ್ಮಕ್ಕ ಅದೇ ಗ್ರಾಮದ ಚಿಕ್ಕಯ್ಯ ಅವರನ್ನು ವಿವಾಹವಾಗಿದ್ದರು.
ತಿಮ್ಮಕ್ಕ ಯಾವುದೇ ನೆರವಿಲ್ಲದೇ ತನ್ನ ಸಂಪಾದನೆಯಿಂದಲೇ ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದರು. ಇವರ ಪರಿಸರ ಕಾಳಜಿ ಗಮನಿಸಿ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.
2020ರಲ್ಲಿ ಕರ್ನಾಟಕ ಕೇಂದ್ರೀಯ ವಿವಿಯಿಂದ ಗೌರವ ಡಾಕ್ಟರೇಟ್, 2020ರಲ್ಲಿ ಹಂಪಿ ವಿವಿಯ ನಾಡೋಜಾ ಪ್ರಶಸ್ತಿ ಅಲ್ಲದೇ ಪರಿಸರ ನಾಗರಿಕ ಪ್ರಶಸ್ತಿ, ಪರಿಸರ ರತ್ನ ಪ್ರಶಸ್ತಿ,ವೃಕ್ಷ ಮಾತಾ, ಗ್ರೀನ್ ಚಾಂಪಿಯನ್ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.


