Menu

ಪಹಲ್ಗಾಮ್‌ ದಾಳಿ: ಸ್ಫೋಟದಿಂದ ಉಗ್ರನ ಮನೆ ನಾಶ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ ಭಾಗಿಯಾದ ಇಬ್ಬರು ಲಷ್ಕರ್ ಉಗ್ರರ ಮನೆಗಳು ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಮೊಂಘಮಾ ಪ್ರದೇಶದಲ್ಲಿ ನಡೆದ ಪ್ರಬಲ ಸ್ಫೋಟದಲ್ಲಿ ಸಕ್ರಿಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆ ಹಾನಿಗೊಂಡಿದೆ. ಈತ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಸ್ಥಳೀಯ ಕಮಾಂಡರ್ ಎಂದು ಹೇಳಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮನೆಯ ಆವರಣದೊಳಗೆ ಕೆಲವು ಅನುಮಾನಾ ಸ್ಪದ ವಸ್ತು ಗಮನಿಸಿದ್ದಾರೆ. ಅಪಾಯದ ಮುನ್ಸೂಚನೆ ಅರಿತ ಪಡೆಗಳು ವಾಪಸಾಗಿವೆ.

ಅದಾಗಿ ಸ್ವಲ್ಪ ಸಮಯದ ನಂತರ ಮನೆಯಲ್ಲಿ ಭಾರೀ ಸ್ಫೋಟ ಉಂಟಾಗಿದೆ, ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಒಳಗಡೆ ಇದ್ದ ಅನುಮಾನಾಸ್ಪದ ಸ್ಫೋಟಕ ವಸ್ತುವಿನಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಎಂದು ಮೂಲಗಳು ತಿಳಿಸಿವೆ.

Related Posts

Leave a Reply

Your email address will not be published. Required fields are marked *