ನವದೆಹಲಿ:ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಭಾರತದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಸುಮಾರು 16ಕ್ಕೂ ಹೆಚ್ಚು ಪಾಕಿಸ್ತಾನ್ ಯೂಟೂಬ್ ಚಾನಲ್ ಗಳನ್ನು ನಿಷೇಧಿಸಿದೆ.
ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪ್ರಚಾರ ಯುದ್ಧ ಕೈಗೊಂಡಿದೆ. ಪಾಕಿಸ್ತಾನ ಜಗತ್ತಿಗೆ ತಾವು ಸರಿಯಿದ್ದೇವೆ ಎನ್ನುವುದನ್ನು ಸಾಬೀತುಪಡಿಸಲು ಮತ್ತು ಭಾರತದ ಹೆಸರನ್ನು ಹಾಳು ಮಾಡಲು ಪಾಕ್ ಯೂಟೂಬ್ ಚಾನೆಲ್ ಗಳು ಕೆಲಸ ಮಾಡುತ್ತಿವೆ.
ಪಾಕಿಸ್ತಾನಿ ಸುದ್ದಿ ವಾಹಿನಿಗಳು ಮತ್ತು ಯೂಟ್ಯೂಬರ್‌ಗಳು ಇದರ ಭಾಗವಾಗಿದ್ದಾರೆ. ಪಾಕಿಸ್ತಾನದ ಈ ಪಿತೂರಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿರುವ ಅದರ ಹಲವು ಸುದ್ದಿ ಮತ್ತು ಯೂಟ್ಯೂಬ್ ಚಾನಲ್‌ಗಳನ್ನು ನಮ್ಮ ದೇಶದಲ್ಲಿ ನಿಷೇಧಿಸಲಾಗಿದೆ.
ನಮ್ಮ ದೇಶ, ನಮ್ಮ ಸೇನೆ ಮತ್ತು ನಮ್ಮ ಭದ್ರತಾ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಮತ್ತು ದಾರಿತಪ್ಪಿಸುವ ನಿರೂಪಣೆಗಳೊಂದಿಗೆ ಪ್ರಚೋದನಕಾರಿ ಹಾಗೂ ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಭಾರತವು 16 ಪಾಕಿಸ್ತಾನಿ ಯೂಟ್ಯೂಬ್ ಚಾನಲ್‌ಗಳನ್ನು ನಿಷೇಧಿಸಿದೆ. ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಗೃಹ ಸಚಿವಾಲಯದ ಶಿಫಾರಸುಗಳ ಆಧಾರದ ಮೇಲೆ ಕೇಂದ್ರ ಸರ್ಕಾರವು ಈ ಕಠಿಣ ನಿರ್ಧಾರ ತೆಗೆದುಕೊಂಡಿದೆ.